15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ ನಿಯಂತ್ರಿಸಲು ಹೊಸ ಸುಗ್ರೀವಾಜ್ಞೆ ಜಾರಿಗೆ ಬಂದಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿರುವ ವಾಹನಗಳ ಸಂಚಾರ ಹೆಚ್ಚಾಗಿದೆ, ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಈ ವಾಹನಗಳು ಬಹುಪಾಲು ಖಾಯಂ ರಾಜ್ಯದಲ್ಲೇ ಬಳಸಲ್ಪಡುತ್ತಿದ್ದು, ಆದರೆ ರಾಜ್ಯಕ್ಕೆ ಯಾವುದೇ ತೆರಿಗೆ ಆದಾಯ ಲಭಿಸುತ್ತಿಲ್ಲ. ಎಂಬುದನ್ನ ಗಮನದಲ್ಲಿಟ್ಟುಕೊಂಡು, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ವಿಧಿಸುವಿಕೆ (ತಿದ್ದುಪಡಿ) ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ.

ಹೊಸ ನಿಯಮದ ಪ್ರಕಾರ ₹10 ಲಕ್ಷದಿಂದ ₹15 ಲಕ್ಷ ಮೌಲ್ಯದ ವಾಹನಗಳಿಗೆ ಶೇ. 15 ತೆರಿಗೆ, ₹15 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಾಹನಗಳಿಗೆ ಶೇ. 18 ತೆರಿಗೆ, ಹಳೆಯ ವಾಹನಗಳಿಗೆ ವಯಸ್ಸು ಹಾಗೂ ಸವೆತ ಆಧಾರಿತ ತೆರಿಗೆ

ಎಲೆಕ್ಟ್ರಿಕ್ ವಾಹನಗಳಿಗೂ ನಿಯಮ ಅನ್ವಯ ₹25 ಲಕ್ಷಕ್ಕಿಂತ ಅಧಿಕ ಮೌಲ್ಯದ EVಗಳಿಗೆ ಶೇ. 10 ತೆರಿಗೆ ವಿಧಿಸಲು ಮೂಲಕ ರಾಜ್ಯದ ತೆರಿಗೆ ಆದಾಯವನ್ನು ಹೆಚ್ಚಿಸುವುದು ಮತ್ತು ಹೊರರಾಜ್ಯ ನೋಂದಣಿಯ ವಾಹನಗಳಿಂದ ಉಂಟಾಗುತ್ತಿರುವ ಪರಿಸರ ಮಾಲಿನ್ಯವನ್ನು ನಿಯಂತ್ರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

ಅಧಿಕಾರಿಗಳ ಹೇಳಿಕೆ ಪ್ರಕಾರ, ಅನೇಕರು ತೆರಿಗೆ ತಪ್ಪಿಸಲು ನೆರೆಯ ರಾಜ್ಯಗಳಲ್ಲಿ ವಾಹನ ನೋಂದಣಿ ಮಾಡಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಅವುಗಳನ್ನು ಬಳಸುತ್ತಿರುವುದರಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ.

ಈ ಹೊಸ ತೆರಿಗೆ ನೀತಿ ಜಾರಿಗೆ ಬಂದ ನಂತರ, ಹೊರರಾಜ್ಯ ನೋಂದಣಿಯ ವಾಹನಗಳ ಬಳಕೆ ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ದೊಡ್ಡ ಬದಲಾವಣೆ ಕಾಣುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ರಾಜ್ಯದ ತೆರಿಗೆ ವ್ಯವಸ್ಥೆಯಲ್ಲಿ ಇದು ಮಹತ್ವದ ತಿರುವು ಎನ್ನಲಾಗುತ್ತಿದೆ.

About The Author