ಮಾಂಡೌಸ್ ಚಂಡಮಾರುತದ ಎಫೆಕ್ಟ್ ನಿಂದ ಕಳೆದ ಮೂರ್ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಸಹ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಮಳೆಯಾಗಲಿದೆ.
ಬೆಂಗಳೂರು ಗ್ರಮಾಂತರದಲ್ಲಿ ಇಂದಿನಿಂದ 5 ದಿನಗಳ ಕಾಲ ಜಿ-20 ಶೃಂಗಸಭೆ
ಇನ್ನು ಡಿ.16ರವೆರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುಂಜಾಗ್ರಾತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಹೆಸರು ಕಾಳು ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ..
ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..