- Advertisement -
ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Department of Health and Family Welfare) ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಇಂದು 354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,60,615ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 9,386 ಕ್ಕೆ ಏರಿಕೆಯಾಗಿದೆ.
- Advertisement -

