Monday, December 23, 2024

Latest Posts

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಬಗ್ಗೆ ಸಿಎಂ ಹೇಳಿದ್ದೇನು..

- Advertisement -

www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು.

ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು ಬೆಳಗಾವಿ ಜಿಲ್ಲೆಯ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವ ಆಚರಣೆಗೆ ಬರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಉಪಚುನಾವಣೆಯ ಕ್ಷೇತ್ರವಾದ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿ ಬಂದಿದ್ದೇನೆ. ಇಂದು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿದ ಬಳಿಕ ಮತ್ತೇ ಹಾವೇರಿ ಜಿಲ್ಲೆಯ ಹಾನಗಲ್ ಮತಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ ಕಾರ್ಯ ನಡೆಸಲಿದ್ದೇನೆ. ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪಷ್ಟ ಬಹುಮತದಿಂದ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಿತ್ತೂರು ಕರ್ನಾಟಕದ ಘೋಷಣೆಗೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಸಚಿವ ಸಂಪುಟದಲ್ಲಿ ತೀರ್ಮಾನವಾಗಬೇಕಾಗಿರುವ ವಿಷಯ ಎಂದರು. ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ

- Advertisement -

Latest Posts

Don't Miss