Thursday, October 30, 2025

Latest Posts

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

- Advertisement -

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು, ಮನೆ ಮಂದಿಯಿಂದ ಅಪ್ಪುವಿಗೆ 4ನೇ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ದಂಪತಿಗಳೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ರಾಜರತ್ನನ ನೆನಪಿಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಅನ್ನದಾನ, ರಕ್ತದಾನ ಮತ್ತು ನೇತ್ರದಾನ ಶಿಬಿರಗಳು ಆಯೋಜನೆಯಾಗಿದ್ದವು. ನಿಗದಿತ ಸ್ಥಳಗಳಲ್ಲಿ ಅಪ್ಪು ಪ್ರತಿಮೆಗೆ ಪೂಜೆ ಸಲ್ಲಿಸಿ, ಪ್ರಸಾದ ಹಂಚುವ ಕಾರ್ಯಕ್ರಮಗಳೂ ನಡೆದಿವೆ.

ಅಭಿಮಾನಿಗಳ ದಂಡು ಕಂಠೀರವ ಸ್ಟುಡಿಯೋಗೆ ಆಗಮಿಸಿ ತಮ್ಮ ಪ್ರೀತಿಯ ನಟನಿಗೆ ಗೌರವ ಸಲ್ಲಿಸಿ ನಮಿಸಿದ್ದಾರೆ. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ ನಾಯಕನಟನಾಗಿ ಜನಮನ ಗೆದ್ದ ಪುನೀತ್ ರಾಜ್‌ಕುಮಾರ್ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಕನ್ನಡ ಸಿನಿಮಾಗೆ ಹೊಸ ಚೈತನ್ಯ ತಂದಿದ್ದರು. ಕೇವಲ 46ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರೂ, ಅಪ್ಪು ನೆನಪು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss