ಬೆಂಗಳೂರು : ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ವಿಶ್ವದ ಹಲವಾರು ಪ್ರಮುಖರನ್ನು ಹಾಗೂ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ವಿದೇಶದವರು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶ್ವ ಹೂಡಿಕೆದಾರರ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.
India has reported the highest foreign direct investment (FDI Inflow) to the tune of $83.57 billion for the financial year 2021-22.
In the computer hardware and software sector, Karnataka bagged the highest share of the FDI inflow (53%) followed by Delhi & Maharastra (17% Each).
— Basavaraj S Bommai (@BSBommai) May 22, 2022
I welcome all the Foreign investors to Karnataka and assure that we will provide the best of infrastructural facilities at the quickest possible time.
— Basavaraj S Bommai (@BSBommai) May 22, 2022
ಕೈಗಾರಿಕೆಗಳ ಸ್ಥಾಪನೆಗೆ ಕ್ರಮ
ಈ ಬಾರಿ ಕೇವಲ ಒಪ್ಪಂದಗಳು ಮಾತ್ರವಲ್ಲದೆ, ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಕೈಗಾರಿಕಾ ಸಚಿವ ಮುರೇಶ್ ನಿರಾಣಿ ಹಾಗೂ ಉನ್ನತ ಶಿಕ್ಷಣ ಹಾಗೂ ಐ.ಟಿ. ಬಿಟಿ ಸಚಿವ ಡಾ: ಅಶ್ವತ್ಥ್ ನಾರಾಯಣ್ ದಾವೊಸ್ ಗೆ ತಮ್ಮೊಂದಿಗೆ ಪ್ರಯಾಣಿಸುತ್ತಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.



