www.karnatakatv.net: ರಾಜ್ಯ ಸರ್ಕಾರಾ, ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಸಲು ನಿರ್ಧರಿಸಿದೆ. SSLC ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಪರೀಕ್ಷೆ ನಡೆಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆ ಅತ್ಯಂತ ಸರಳವಾಗಿರಲಿದೆ. ಓಎಂಆರ್ ಶೀಟ್ ನಲ್ಲಿ ವಿದ್ಯಾರ್ಥಿಗಳು ಉತ್ತರಗಳನ್ನ ಭರ್ತಿ ಮಾಡಬೇಕು ಎಂದ್ರು. ಸುಮಾರು 10,000 ವಿದ್ಯಾರ್ಥಿಗಳು ತಮ್ಮ ಅಕ್ಕ-ಪಕ್ಕದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೂನ್ 30ರಂದು ಎಲ್ಲಾ ಶಾಲೆಗಳ ಮುಖ್ಯಸ್ಥರಿಗೆ ಹಾಲ್ ಟಿಕೆಟ್ ಕಳುಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. ಈ ಬಾರಿಯ SSLC ಪರೀಕ್ಷೆಯಲ್ಲಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗಿಯಾಗಲಿದ್ದಾರೆ. ಕಳೆದ 8,46,000 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ರು. ಈ ವರ್ಷ 73,066 ಪರೀಕ್ಷಾ ಕೇಂದ್ರಗಳು ಇರಲಿವೆ. ಆರೋಗ್ಯ ಇಲಾಖೆ ಪರೀಕ್ಷೆ ಬಗ್ಗೆ ವಿಸ್ತೃತವಾದ SOP ನೀಡಿದೆ. ಒಂದು ಕೊಠಡಿಯಲ್ಲಿ 12 ಮಂದಿಗೆ ಪರೀಕ್ಷೆಗೆ ಬರೆಯಲು ಅವಕಾಶ ನೀಡಲಾಗುತ್ತಿದ್ದು, ಪರೀಕ್ಷಾ ಕಾರ್ಯಕ್ಕೆ ನೇಮಕಗೊಳ್ಳುವ ಎಲ್ಲಾ ಸಿಬ್ಬಂದಿಗಳು ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ ಎಂದು ಸೂಚಿಸಲಾಗಿದೆ. ಪರೀಕ್ಷೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಲಾಗಿದೆ. ಇನ್ನು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ಕಡ್ಡಾಯ ಎಂದು ಈ ಹಿಂದೆ ಹೇಳಲಾಗಿತ್ತು. ಆದ್ರೆ, ಈಗ ತಾಂತ್ರಿಕ ಸಮಿತಿಯ ವರದಿಯನ್ನು ಆಧರಿಸಿ ಸರ್ಜಿಕಲ್ ಮಾಸ್ಕ್ ಅಥವಾ ಒಳ್ಳೆಯ ಗುಣಮಟ್ಟದ ಬಟ್ಟೆ ಮಾಸ್ಕ್ ಸಾಕು ಎಂದು ಹೇಳಲಾಗಿದೆ. ಇನ್ನು, ಗಡಿ ಜಿಲ್ಲೆಗಳಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು ಅನ್ನೋದರ ಬಗ್ಗೆ ಸೂಚನೆ ನೀಡಲಾಗಿದೆ. ಅಲ್ಲದೇ, ಕೊರೊನಾ ಲಕ್ಷಣಗಳನ್ನ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು, ಹಾಗೇ ಪಾಸಿಟಿವಿ ಇರುವ ವಿದ್ಯಾರ್ಥಿಗಳಿದ್ದರೆ ಅಂತಹವರಿಗೆ ಕೊವಿಡ್ ಕೇರ್ ಸೆಂಟರ್ ನಿಂದ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದ್ರು. ಇದೇ ವೇಳೆ ಪರೀಕ್ಷೆಯಲ್ಲಿ ಭಾಗಿಯಾಗಲಿರೋ ಎಲ್ಲಾ ಅಧಿಕಾರಿಗಳು, ಶಿಕ್ಷಕರಿಗೆ ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.