ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ರಾಜ್ಯ ಎಸ್‍ಟಿ ಮೋರ್ಚಾದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಕಾರ್ಯಕ್ರಮದ ಕುರಿತು ಮಾರ್ಗದರ್ಶನ ಮಾಡಿದರು. ಇದನ್ನೂ ಓದಿ: ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ
ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್ ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ಲೋಕಸಭಾ ಸದಸ್ಯ ದೇವೇಂದ್ರಪ್ಪ, ಶಾಸಕರಾದ ರಾಜುಗೌಡ, ಸೋಮಲಿಂಗಪ್ಪ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: 50 ವರ್ಷ ಪೂರೈಸಿದ ಸೌರವ್ ದಾದಾ
ಮಹಿಳಾ ಮೋರ್ಚಾ ವತಿಯಿಂದ 2,500 ಮಹಿಳೆಯರು ಶಾಂಘ್ರಿಲಾ ಹೋಟೆಲ್ ಬಳಿ ಸೇರಿ ಅವರನ್ನು ಸ್ವಾಗತಿಸಲು ಮಹಿಳಾ ಮೋರ್ಚಾದ ಇನ್ನೊಂದು ಸಭೆಯು ನಿರ್ಧರಿಸಿತು.