Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕಗಳ ಉದ್ಘಾಟನಾ ಸಮಾರಂಭ ಡಿ.15ರಂದು ಬೆಂಗಳೂರಿನ ಶೇಷಾದ್ರಿಪುರಂ ಕುಮಾರ ಪಾರ್ಕ್ ಗಾಂಧಿ ಭವನದ ಬಾಪೂಜಿ ಸಭಾಂಗಣದಲ್ಲಿ ಜರುಗಲಿದೆ ಎಂದು ವೇದಿಕೆಯ ಧಾರವಾಡ ಜಿಲ್ಲಾಧ್ಯಕ್ಷ ವೈ.ಎನ್. ಪಾಟೀಲ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹಾಗೂ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷಿö್ಮÃ ಚೌಧರಿ ಉದ್ಘಾಟಿಸುವರು ಎಂದರು.
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ ನಾಗರಾಜ ಸಮಾರಂಭದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಸಬ್ಬಲಿ ರಾಯಚೂರ, ಬೆಂಗಳೂರು ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ ಬೆಳ್ಳೂರ, ಉತ್ತರ ಕರ್ನಾಟಕ ಹೋರಾಟ ವೇದಿಕೆ ರಾಜ್ಯಾಧ್ಯಕ್ಷ ಭೀಮಪ್ಪ ಗಡಾದ, ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಕೃಷ್ಣಮೂರ್ತಿ ಉಪಸ್ಥಿತರಿರುವರು ಎಂದು ಹೇಳಿದರು.
ವೇದಿಕೆಯ ಧಾರವಾಡ ಜಿಲ್ಲಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಪರಶುರಾಮ ಬಗಲಿ, ಮಾಣಿಕ್ಯ ಚಿಲ್ಲೂರ, ಮಂಜುನಾಥ ಬೂದಿಹಾಳ, ಗೂಳಪ್ಪ ಕುಂಬಾರ, ಎಸ್.ಎಸ್. ನಾಗನಗೌಡ್ರ ಇದ್ದರು.