State News:
ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. 14ನೇ ಬಾರಿ ರಾಜ್ಯದ ಟ್ಯಾಬ್ಲೋ ಕರ್ತವ್ಯವ ಪಥದಲ್ಲಿ ಸಾಗಲಿದೆ. ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ್ದ ಬಗ್ಗೆ ವರದಿಯಾಗಿತ್ತು. ಬಳಿಕ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಈಗ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಣೆ ಹಾಕಿದ್ದು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ರಾಜ್ಯ ನಾರಿ ಶಕ್ತಿ ಕಲ್ಪನೆಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ ಮೂವರು ಮಹಿಳಾ ಸಾಧಕಿಯರ ಬಗ್ಗೆ ಸ್ತಬ್ಧಚಿತ್ರ ತಯಾರಾಗಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಅನಾವರಣಗೊಳ್ಳಲಿದೆ.
“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ