- Advertisement -
ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು ಬಂದಿದೆ. ಇನ್ನು ಬೆಳಗಾವಿಯಲ್ಲಿ 11 ಪ್ರಕರಣಗಳು ಪತ್ತೆಯಾಗಿವೆ.. ಬೆಂಗಳೂರು ನಗರದಲ್ಲಿ 6 ಪ್ರಕರಣ ಪತ್ತೆಯಾಗಿದ್ದು ಅದರಲ್ಲಿ ಮೂರು ಪಾದರಾಯನಪುರಕ್ಕೆ ಸೇರಿದವರಾಗಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಒಂದೇ ದಿನ ಮೂವರಲ್ಲಿ ಸೋಂಕು ಪತ್ತೆಯಾಗಿದೆ.. ಈ ಮೂಲಕ ಇದುವರೆಗೂ ರಾಜ್ಯದಲ್ಲಿ 753 ಜನರಲ್ಲಿ ಸೋಂಕು ಪತ್ತೆಯಾಗಿದಂತಾಗಿದ್ದು 30 ಸೊಂಕಿತರು ಮೃತಪಟ್ಟಿದ್ದು 376 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ..
- Advertisement -