ಬಾಕಿ ಉಳಿದಿರುವ ಟ್ರಾಫಿಕ್ ದಂಡ ಪಾವತಿಸಲು ಸರ್ಕಾರ ಇದೀಗ ಬಂಪರ್ ಆಫರ್ ಒಂದನ್ನು ತಂದಿದ್ದು, ಶೇ.50ರಷ್ಟು ರಿಯಾಯಿತಿ ಇದರಲ್ಲಿ ಸಿಗಲಿದೆಯಂತೆ. ಈ ಮೂಲಕ ರಾಜ್ಯದ ವಾಹನ ಸವಾರರಿಗೆ ಸರ್ಕಾರದಿಂದ ಮತ್ತೊಮ್ಮೆ ಬಿಗ್ ರಿಲೀಫ್ ಸಿಕ್ಕಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತವನ್ನು ಶೇ.50ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ಸರ್ಕಾರ ಮತ್ತೊಂದು ಅವಕಾಶ ಕಲ್ಪಿಸಿದೆ.
ಎಸ್ ‘ರಾಜ್ಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ ನೀಡಲಾಗಿದ್ದ ರಿಯಾಯಿತಿ ಸೌಲಭ್ಯವನ್ನು ಮತ್ತೊಮ್ಮೆ ವಿಸ್ತರಿಸುವಂತೆ ಸಾರ್ವಜನಿಕರಿಂದ ಹಾಗೂ ವಾಹನ ಸವಾರರಿಂದ ಸಲ್ಲಿಕೆಯಾಗಿದ್ದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ತುಂಬಾ ಗಮನವಿಟ್ಟು ಕೇಳಿ, ಈ ವಿಶೇಷ ರಿಯಾಯಿತಿಯು ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಮಾತ್ರ ಅನ್ವಯವಾಗಲಿದೆ. ವಾಹನ ಸವಾರರು ಈ ನಿರ್ದಿಷ್ಟ ಅವಧಿಯೊಳಗೆ ಬಾಕಿ ಇರುವ ದಂಡದ ಮೊತ್ತದಲ್ಲಿ ಅರ್ಧದಷ್ಟು ಅಂದರೆ ಬರೀ ಶೇ.50ರಷ್ಟು ಹಣವನ್ನು ಮಾತ್ರ ಪಾವತಿಸಿ ತಮ್ಮ ಮೇಲಿರುವ ಕೇಸ್ಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ದೀರ್ಘಕಾಲದಿಂದ ಬಾಕಿ ಉಳಿದಿರುವ ದಂಡದ ಪ್ರಕರಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಈ ಸೌಲಭ್ಯವನ್ನು ಮರು ಜಾರಿಗೊಳಿಸಿದೆ. ಹೀಗಾಗಿ, ನಿಮ್ಮ ಬಳಿಯೂ ಟ್ರಾಫಿಕ್ ಫೈನ್ ಬಾಕಿ ಇದ್ದರೆ, ಈ ಸುವರ್ಣ ಅವಕಾಶವನ್ನು ತಪ್ಪದೇ ಬಳಸಿಕೊಳ್ಳಿ.



