Tipaturu News: ತಿಪಟೂರು. ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ ಮೂಲ ಸೌಕರ್ಯವಿಲ್ಲದೆ ಸ್ವಚ್ಛತೆ ಇಲ್ಲದೆ ಅನೈತಿಕ ಚಟುವಟಿಕೆ ತಾಣವಾಗಿ ಬದಲಾಗಿದೆ ಎಂಬ ಸುದ್ದಿಯನ್ನು ಕಳೆದ ಶನಿವಾರ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.
ಮಾಧ್ಯಮದ ವರದಿಗೆ ಎಚ್ಚೆತ್ತ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡು ಸ್ವಚ್ಛತೆ ಮಾಡಿಸಿದ್ದಾರೆ. ಇನ್ನು ಮಾಧ್ಯಮಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದರು.



