Monday, July 22, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಬೆಳಗಾವಿಯ 18 ಕ್ಷೇತ್ರಗಳ ಫೆಬ್ರವರಿ ಟ್ರೆಂಡ್ ಹೇಗಿದೆ.?

ಬೆಂಗಳೂರು ಹೊರತುಪಡಿಸಿದ್ರೆ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳಿರೋ ಜಿಲ್ಲೆ ಬೆಳಗಾವಿ. ಸದ್ಯ ಇಡೀ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವರ್ಸಸ್ ರಮೇಶ್ ಜಾರಕಿಹೊಳಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವೈಯುಕ್ತಿಕ ವಾಗ್ದಾಳಿಗಳು ಈಗಾಗ್ಲೇ ಮುಗಿಲು ಮುಟ್ಟಿದ್ದು, ಇಡೀ ಜಿಲ್ಲೆಯಲ್ಲಿ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ನಡುವಿನ ಫೈಟ್ ಎನ್ನುವಂತಾಗಿದೆ. 18 ವಿಧಾನಸಭಾ ಕ್ಷೇತ್ರ ಬರುವ ಬೆಳಗಾವಿಯಲ್ಲಿ ಕರ್ನಾಟಕ ಟಿವಿಯ ಫೆಬ್ರವರಿ ಸಮೀಕ್ಷೆ ಪ್ರಕಾರ ಕಾಂಗ್ರೆಸ್​​ 9 ಹಾಗೂ ಬಿಜೆಪಿ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎರಡೂ ಪಕ್ಷಗಳು ಈ ಬಾರಿ ಸಮಬಲದ ಹೋರಾಟ ನಡೆಸಿದ್ದು, ತಲಾ 9 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿವೆ.

ಬೆಳಗಾವಿ 18 ಕ್ಷೇತ್ರ

ಬಿಜೆಪಿ – 9
ಕಾಂಗ್ರೆಸ್​ – 9

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Belagavi

ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ್ ರೆಡ್ಡಿ ಚಾಲನೆ

ಚಿಕ್ಕಬಳ್ಳಾಪುರ: ರಾಮಲಿಂಗಪ್ಪ ನೇತೃತ್ವದ ಉಚಿತ ಕಣ್ಣಿನ ತಪಾಸಣ ಶಿಬಿರ

ಭವಾನಿ ರೇವಣ್ಣಗೆ ಟಿಕೇಟ್ ಪಕ್ಕಾ..?! ಅನುಮಾನ ಮೂಡಿಸಿದ ಭವಾನಿ ನಡೆ…!

- Advertisement -

Latest Posts

Don't Miss