Political News:
Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..
ಚಾಮರಾಜನಗರ 4 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮೈಸೂರುಗೆ ಅಂಟಿಕೊಂಡಿದ್ದರೂ, ತಮಿಳುನಾಡು ಹಾಗೂ ಕೇರಳ ಜೊತೆ ಗಡಿ ಹಂಚಿಕೊಂಡಿರೋ ಚಾಮರಾಜನಗರ ಜಿಲ್ಲೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿಯಾಗಿಲ್ಲ. ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ ನಾಲ್ಕು ಕ್ಷೇತ್ರಗಳು ಜಿಲ್ಲೆಗೆ ಬರುತ್ವೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಓಡಾಟ, ಸೋಮಣ್ಣ ಅವರ ಓಡಾಟ ಜೋರಾಗಿದೆ. ಇದರಿಂದ ಬಿಜೆಪಿ ಒಂದ್ ರೀತಿ ಶಕ್ತಿ ಬಂದಂತೆ ಆಗ್ತಿದೆ. ಆದ್ರೆ, ಯಾರು ಅಭ್ಯರ್ಥಿಗಳು ಅನ್ನೋದು ಇನ್ನೂ ಇತ್ಯರ್ಥ ಆಗಿಲ್ಲ.. ಧ್ರುವನಾರಾಯಣ, ಪುಟ್ಟರಂಗಶೆಟ್ಟಿ, ಮಹದೇವಪ್ರಸಾದ್, ಎನ್ ಮಹೇಶ್, ಪ್ರಭಾವ ಜೋರಾಗಿಯೇ ಇದೆ.

ಸದ್ಯ ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಬಿಜೆಪಿ 1, ಕಾಂಗ್ರೆಸ್ 2, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಚಾಮರಾಜನಗರ 4 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 1
ಕಾಂಗ್ರೆಸ್ – 2
ಜೆಡಿಎಸ್ – 1
ಚಾಮರಾಜನಗರ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಹನೂರು : ಜೆಡಿಎಸ್ ಮುನ್ನಡೆ
ಕೊಳ್ಳೇಗಾಲ : ಬಿಜೆಪಿ ಮುನ್ನಡೆ
ಚಾಮರಾಜನರ : ಕಾಂಗ್ರೆಸ್ ಮುನ್ನಡೆ
ಗುಂಡ್ಲುಪೇಟೆ : ಕಾಂಗ್ರೆಸ್ ಮುನ್ನಡೆ
ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.
ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲಬುರಗಿ ಜಿಲ್ಲೆ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉತ್ತರ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?




