Saturday, July 27, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ಚಿಕ್ಕಬಳ್ಳಾಪುರ 5 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಹಳೇ ಮೈಸೂರು ಭಾಗದ, ಬೆಂಗಳೂರು ಪಕ್ಕದಲ್ಲೇ ಇರೋ ಜಿಲ್ಲೆ ಚಿಕ್ಕಬಳ್ಳಾಪುರ. ಆಂಧ್ರ ರಾಜ್ಯಕ್ಕೆ ಗಡಿಯನ್ನ ಹಂಚಿಕೊಂಡಿರೋ ಜಿಲ್ಲೆ. ಚಿಕ್ಕಬಳ್ಳಾಪುರದಲ್ಲಲಿ 5 ವಿಧಾನಸಭಾ ಕ್ಷೇತ್ರ ಬರುತ್ವೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ ಇಲ್ಲಿನ ಕ್ಷೇತ್ರಗಳು. ಕೃಷಿ ಮೂಲ ಕಸುಬು. ದ್ರಾಕ್ಷಿ, ರೇಷ್ಮೆ, ತರಕಾರಿ, ಹಾಲು ಉತ್ಪಾದನೆ ಜಾಸ್ತಿ. ಇತ್ತೀಚೆಗೆ ಮಳೆ ಆಗಿದ್ದರಿಂದ ಅಂತರ್ ಜಲ ಚೆನ್ನಾಗಿ ವೃದ್ಧಿಯಾಗಿದೆ. ರೈತರೇ ಹೆಚ್ಚಿರುವ ಜಿಲ್ಲೆ. ಡಾ.ಕೆ. ಸುಧಾಕರ್ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್​ ನಿಂದ ಬಿಜೆಪಿಗೆ ಹೋಗಿ ಪ್ರಭಾವಿ ಮಂತ್ರಿ ಆಗಿದ್ದಾರೆ. ಗೌರಿಬಿದನೂರು ಹಾಗೂ ಬಾಗೇಪಲ್ಲಿಯಲ್ಲಿ ಪಕ್ಷೇತರರ ಅಬ್ಬರ ಜೋರಾಗಿದೆ.

ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 5 ಕ್ಷೇತ್ರಗಳಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರ ಹಾಗೂ ಎರಡು ಕ್ಷೇತ್ರದಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ 5 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 1
ಕಾಂಗ್ರೆಸ್​ – 1
ಜೆಡಿಎಸ್ – 1
ಪಕ್ಷೇತರರು – 2

ಚಿಕ್ಕಬಳ್ಳಾಪುರ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಗೌರಿಬಿದನೂರು : ಪಕ್ಷೇತರ ಅಭ್ಯರ್ಥಿ ಪುಟ್ಟಸ್ವಾಮಿಗೌಡ ಮುನ್ನಡೆ
ಬಾಗೇಪಲ್ಲಿ : ಪಕ್ಷೇತರ ಅಭ್ಯರ್ಥಿ ಮಿಥುನ್ ರೆಡ್ಡಿ ಮುನ್ನಡೆ
ಚಿಕ್ಕಬಳ್ಳಾಪುರ : ಬಿಜೆಪಿ ಮುನ್ನಡೆ
ಶಿಡ್ಲಘಟ್ಟ : ಜೆಡಿಎಸ್ ಮುನ್ನಡೆ
ಚಿಂತಾಮಣಿ : ಕಾಂಗ್ರೆಸ್ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಳ್ಳಾರಿ-ವಿಜಯನಗರ 10 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

 

 

 

- Advertisement -

Latest Posts

Don't Miss