Monday, December 23, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ಚಿತ್ರದುರ್ಗ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಧ್ಯ ಕರ್ನಾಟಕದಲ್ಲಿ ನಿರ್ಣಾಯಕ ಜಿಲ್ಲೆ ಚಿತ್ರದುರ್ಗ ಜಿಲ್ಲೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 6 ವಿಧಾನಸಭಾ ಕ್ಷೇತ್ರ ಬರುತ್ತೆ. ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ಆರು ಕ್ಷೇತ್ರ. ಕಳೆದ ಬಾರಿ 6 ರಲ್ಲಿ 5 ಬಿಜೆಪಿ ಗೆದ್ದಿತ್ತು, ಕಾಂಗ್ರೆಸ್ 1 ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಯಾರಿಗೆ ಎಷ್ಟು ಸೀಟು.? ಇನ್ನೂ ಟಿಕೆಟ್ ಫೈನಲ್ ಆಗಿಲ್ಲ.

ಸದ್ಯ ಚಿತ್ರದುರ್ಗ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 6 ಕ್ಷೇತ್ರಗಳಲ್ಲಿ ಬಿಜೆಪಿ 4 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಚಿತ್ರದುರ್ಗ 6 ಕ್ಷೇತ್ರಗಳ ಸರ್ವೇ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 4
ಕಾಂಗ್ರೆಸ್​ – 1
ಜೆಡಿಎಸ್ – 1

ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಾರೀ ಬದಲಾವಣೆ ಆಗುವ ಸಾಧ್ಯತೆ ಇದೆ. 2013ರಲ್ಲಿ ಬಿಎಸ್​ ಆರ್​ ಪಕ್ಷದಿಂದ ಗೆದ್ದಿದ್ದ ತಿಪ್ಪೇಸ್ವಾಮಿ, 2018ರಲ್ಲಿ ಬಿಜೆಪಿ ಟಿಕೆಟ್ ಸಿಗದೇ ಕಾಂಗ್ರೆಸ್​​ ಸೇರಿದ್ರು. ಇದೀಗ ಕಾಂಗ್ರೆಸ್ ಬಿಟ್ಟು, ಮತ್ತೆ ಬಿಜೆಪಿ ಸೇರಿದ್ದಾರೆ. ಹೀಗಾಗಿ ಮೊಳಕಾಲ್ಮೂರು ಕ್ಷೇತ್ರದಿಂದ ತಿಪ್ಪೇಸ್ವಾಮಿ ಬಿಜೆಪಿ ಅಭ್ಯರ್ಥಿ ಆಗೋದು ಬಹುತೇಕ ಫಿಕ್ಸ್. ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆಗೂ ಮುನ್ನವೇ ಸಮೀಕ್ಷೆ ಅಂಶಗಳನ್ನ ಶೇಖರಿಸಿದ್ರಿಂದ ಮೊಳಕಾಲ್ಮೂರಲ್ಲಿ ಕಾಂಗ್ರೆಸ್ ಮುನ್ನಡೆ ಇದೆ. ಮುಂದೆ ಬದಲಾಗಬಹುದು.

ಚಿತ್ರದುರ್ಗ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮೊಳಕಾಲ್ಮೂರು : ಕಾಂಗ್ರೆಸ್ ಮುನ್ನಡೆ (ತಿಪ್ಪೆಸ್ವಾಮಿ ಬಿಜೆಪಿ ಸೇರ್ಪಡೆಗೂ ಮುನ್ನ)
ಚಳ್ಳಕೆರೆ : ಜೆಡಿಎಸ್
ಚಿತ್ರದುರ್ಗ : ಬಿಜೆಪಿ
ಹಿರಿಯೂರು : ಬಿಜೆಪಿ
ಹೊಸದುರ್ಗ : ಬಿಜೆಪಿ
ಹೊಳಲ್ಕೆರೆ : ಬಿಜೆಪಿ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಳ್ಳಾರಿ-ವಿಜಯನಗರ 10 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss