Saturday, July 27, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂ.1 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಲ್ಯಾಣ ಕರ್ನಾಟಕ ಭಾಗಕ್ಕೆ ಒಟ್ಟು 7 ಜಿಲ್ಲೆಗಳ 41 ಕ್ಷೇತ್ರ ಬರುತ್ತವೆ. ಶ್ರೀರಾಮುಲು, ಜನಾರ್ದನ ರೆಡ್ಡಿ, ಆನಂದ್ ಸಿಂಗ್, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಸೇರಿದಂತೆ ಘಟಾನುಘಟಿ ನಾಯಕರು ಸ್ಪರ್ಧೆ ಮಾಡುವ ಕ್ಷೇತ್ರಗಳು ಈ ಭಾಗದಲ್ಲಿವೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕಕ್ಕೆ ಬರುತ್ವೆ.

ಕಲ್ಯಾಣ ಕರ್ನಾಟಕದ ಒಟ್ಟು 41 ಕ್ಷೇತ್ರಗಳ ಪೈಕಿ ಬಿಜೆಪಿ 13, ಕಾಂಗ್ರೆಸ್ 21, ಜೆಡಿಎಸ್ 6, ಕೆಆರ್​ ಪಿಪಿ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಕಲ್ಯಾಣ ಕರ್ನಾಟಕ 41 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 13
ಕಾಂಗ್ರೆಸ್ : 21
ಜೆಡಿಎಸ್ : 06
ಕೆಆರ್​ ಪಿಪಿ : 01

ಕಲಬುರಗಿ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ. ಖರ್ಗೆ ಮಗ ಪ್ರಿಯಾಂಕ್ ಖರ್ಗೆಯನ್ನ ಸೋಲಿಸೋಕೆ ಇಡೀ ಬಿಜೆಪಿ ಟೀಂ ನಿಂತಿದೆ. ಈ ಹಿಂದೆ ಖರ್ಗೆ ಅವರನ್ನ ಲೋಕಸಭೆಯಲ್ಲಿ ಬಿಜೆಪಿ ನಾಯಕರು ಸೋಲಿಸಿದ್ರು. ಈಗ ವಿಧಾನಸಭಾ ಎಲೆಕ್ಷನ್ ಸರದಿ ಬಂದಿದೆ. ಘಟಾನುಘಟಿ ನಾಯಕರು ಜಿಲ್ಲೆಯಲ್ಲಿದ್ದಾರೆ. ಧರಂಸಿಂಗ್ ಮಗ ಅಜಯ್ ಸಿಂಗ್, ಮಾಲೀಕಯ್ಯ ಗುತ್ತೇದಾರ್, ಶರಣ್ ಪ್ರಕಾಶ್ ಪಾಟೀಲ್, ಉಮೇಶ್ ಜಾಧವ್ ಸೇರಿದಂತೆ ಸಾಕಷ್ಟು ದೊಡ್ಡ ದೊಡ್ಡ ನಾಯಕರು ಜಿಲ್ಲೆಯಲ್ಲಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಸಾಕಷ್ಟು ತೀವ್ರ ಹಣಾಹಣೆಯಿಂದ ಕೂಡಿವೆ. ಕಲಬುರಗಿ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 9 ಕ್ಷೇತ್ರಗಳಲ್ಲಿ ಬಿಜೆಪಿ 4 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಲಬುರಗಿ ಜಿಲ್ಲೆ 9 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 4
ಕಾಂಗ್ರೆಸ್​ – 5

ಯಾದಗಿರಿ ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಸುರುಪುರದ ಸರದಾರ ರಾಜುಗೌಡ, ಬಾಬುರಾವ್ ಚಿಂಚನಸೂರು, ಜೆಡಿಎಸ್ ಯುವ ನಾಯಕ ಶರಣ್ ಗೌಡ ಕಂದಕೂರು ಸೇರಿದಂತೆ ಹಲವು ಘಟಾನುಘಟಿಗಳ ಜಿಲ್ಲೆ ಯಾದಗಿರಿ. ಯಾದಗಿರಿಯಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿವೆ. 4 ಕ್ಷೇತ್ರಗಳೂ ಸಾಕಷ್ಟು ತೀವ್ರ ಹಣಾಹಣೆಯಿಂದ ಕೂಡಿವೆ. ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಯಾದಗಿರಿ ಜಿಲ್ಲೆ 4 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 1
ಕಾಂಗ್ರೆಸ್​ – 2
ಜೆಡಿಎಸ್ – 1

ಬೀದರ್​ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬೀದರ್ ಜಿಲ್ಲೆಯಲ್ಲಿ ಒಟ್ಟು 6 ವಿಧಾನಸಭಾ ಕ್ಷೇತ್ರಗಳಿವೆ.

ಗಡಿ ಜಿಲ್ಲೆ ಬೀದರ್ ನಲ್ಲಿ 6 ವಿಧಾನಸಭಾ ಕ್ಷೇತ್ರಗಳು ಬರುತ್ವೆ. ಬಸವಕಲ್ಯಾಣ, ಹುಮ್ನಾಬಾದ್, ಬೀದರ್ ದಕ್ಷಿಣ, ಬೀದರ್, ಬಾಲ್ಕಿ, ಔರಾದ್​ ಕ್ಷೇತ್ರಗಳು ಜಿಲ್ಲೆಯಲ್ಲಿವೆ. ಪ್ರಭು ಚವ್ಹಾಣ್, ಈಶ್ವರ್ ಖಂಡ್ರೆ, ರಹೀಂ ಖಾನ್, ಅಶೋಕ್ ಖೇಣಿ, ಬಂಡೆಪ್ಪ ಕಾಶಂಪೂರ್, ಖೂಬಾ, ಸಿಎಂ ಇಬ್ರಾಹಿಂ ಮಗ ಸೇರಿದಂತೆ ಘಟಾನುಘಟಿ ನಾಯಕರು ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ಬೀದರ್ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 6 ಕ್ಷೇತ್ರಗಳಲ್ಲಿ ಬಿಜೆಪಿ 2 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೀದರ್ ದಕ್ಷಿಣದಲ್ಲಿ ಎಎಪಿ ಅಭ್ಯರ್ಥಿ ನಸೀಂ ಪಟೇಲ್ ಕೂಡ ತೀವ್ರ ಪೈಪೋಟಿ ನೀಡ್ತಿದ್ದು, ಮುಂದಿನ ದಿನಗಳಲ್ಲಿ ಏನ್ ಬೇಕಾದ್ರೂ ಆಗಬಹುದು.

ಬೀದರ್​ ಜಿಲ್ಲೆ 6 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 2
ಕಾಂಗ್ರೆಸ್​ – 3
ಜೆಡಿಎಸ್ – 1

ರಾಯಚೂರು​ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಲ್ಯಾಣ ಕರ್ನಾಟಕ ಪ್ರಮುಖ ಜಿಲ್ಲೆ ರಾಯಚೂರು. ರಾಯಚೂರು ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರುತ್ವೆ. ರಾಯಚೂರು ಗ್ರಾಮೀಣ, ರಾಯಚೂರು, ಮಾನ್ವಿ , ದೇವದುರ್ಗ, ಲಿಂಗಸಗೂರು, ಸಿಂಧನೂರು, ಮಸ್ಕಿ ಕ್ಷೇತ್ರಗಳು ಜಿಲ್ಲೆಯಲ್ಲಿ ಬರುತ್ವೆ. ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್ ಮೂರು ಪಕ್ಷಗಳ ಅಭ್ಯರ್ಥಿಗಳ ಪೈಪೋಟಿ ಇಲ್ಲಿ ಜೋರಾಗಿದೆ. ಸದ್ಯಕ್ಕೆ ಒಂದು ಹೆಜ್ಜೆ ಜೆಡಿಎಸ್​ ರಾಯಚೂರಲ್ಲಿ ಹೆಚ್ಚು ಪ್ರಾಬಲ್ಯ ಇದೆ ಎಂದೇ ಹೇಳಬಹುದು.

ರಾಯಚೂರು ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 7 ಕ್ಷೇತ್ರಗಳಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ, ಜೆಡಿಎಸ್ 4 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ರಾಯಚೂರು ಜಿಲ್ಲೆ 7 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 1
ಕಾಂಗ್ರೆಸ್​ – 2
ಜೆಡಿಎಸ್ – 4

 

ಕೊಪ್ಪಳ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಲ್ಯಾಣ ಕರ್ನಾಟಕ ಜಿಲ್ಲೆ ಎನ್ನುವುದಕ್ಕಿಂತಲೂ ಹೆಚ್ಚಾಗಿ, ಜನಾರ್ದನ ರೆಡ್ಡಿ ಅವರು ಈ ಬಾರಿ ಕೊಪ್ಪಳದ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಿರೋದು ಸಾಕಷ್ಟು ಕುತೂಹಲ ಮೂಡಿಸಿದೆ. ಇದರ ಜೊತೆ ಕೊಪ್ಪಳದ 5 ಕ್ಷೇತ್ರಗಳಲ್ಲೂ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಪರ್ಧೆ ಮಾಡ್ತಿರೋದು ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ಡ್ಯಾಮೇಜ್ ಮಾಡ್ತಿದೆ.

ಕೊಪ್ಪಳ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 5 ಕ್ಷೇತ್ರಗಳಲ್ಲಿ ಬಿಜೆಪಿ 3 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 1 ಕ್ಷೇತ್ರ, ರೆಡ್ಡಿ ನೇತೃತ್ವದ ಕೆಆರ್​​ಪಿಪಿ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕೊಪ್ಪಳ ಜಿಲ್ಲೆ 5 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 3
ಕಾಂಗ್ರೆಸ್​ – 1
ಕೆಆರ್​ಪಿಸಿ – 1

ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಮುಖ ಜಿಲ್ಲೆ ಬಳ್ಳಾರಿ. ಬಳ್ಳಾರಿ ವಿಜಭಜನೆಯಾಗಿ ವಿಜಯನಗರ ಜಿಲ್ಲೆಯಾದ್​ರೂ, ಅವಳಿ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 10 ವಿಧಾನಸಭಾ ಕ್ಷೇತ್ರಗಳು ಬರುತ್ವೆ. ಸಾಕಷ್ಟು ಬದಲಾವಣೆ ಗಾಳಿ ಬೀಸಿದಂತೆ ಕಾಣಿಸ್ತಿದೆ. ಆನಂದ್ ಸಿಂಗ್ ಬಿಜೆಪಿ, ರೆಡ್ಡಿ ಪಕ್ಷ, ರೆಡ್ಡಿ ಪತ್ನಿ ಸ್ಪರ್ಧೆ, ರಾಮುಲು ಮತ್ತೆ ಬಳ್ಳಾರಿ ಜಿಲ್ಲೆಯಿಂದ ಸ್ಪರ್ಧೆ ಮಾಡಲು ಬಯಸಿರೋದು. ಹೀಗೆ ಸಾಕಷ್ಟು ವಿಚಾರಗಳು ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆ ರಾಜಕೀಯದಲ್ಲಿ ಕುತೂಹಲ ಮೂಡಿಸಿವೆ.

ಬಳ್ಳಾರಿ-ವಿಜಯನಗರ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 10 ಕ್ಷೇತ್ರಗಳಲ್ಲಿ ಬಿಜೆಪಿ 2 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಳ್ಳಾರಿ-ವಿಜಯನಗರ ಜಿಲ್ಲೆ 10 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 2
ಕಾಂಗ್ರೆಸ್​ – 8

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಳ್ಳಾರಿ-ವಿಜಯನಗರ 10 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss