Saturday, July 27, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂ.1 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿಗರ ಭದ್ರಕೋಟೆ, ಕರಾವಳಿ ಭಾಗ. ಕರಾವಳಿಯಲ್ಲಿ 3 ಜಿಲ್ಲೆ ಬರುತ್ತೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ. ಮೂರು ಜಿಲ್ಲೆಗಳಿಂದ ಒಟ್ಟು 19 ಕ್ಷೇತ್ರಗಳಿವೆ. ಕರಾವಳಿ ಭಾಗ ಬಿಜೆಪಿಗರ ಭದ್ರಕೋಟೆ. ಹಿಂದುತ್ವವೇ ಇಲ್ಲಿನ ಪ್ರಮುಖ ಅಜೆಂಡಾ ಹಾಗೂ ಅಸ್ತ್ರ. ಕಾಂಗ್ರೆಸ್ ಈ ಬಾರಿ ಕೆಲವು ಕ್ಷೇತ್ರ ಗೆಲ್ಲೋಕೆ ತಯಾರಿ ನಡೆಸ್ತಿದೆ. ಅಭ್ಯರ್ಥಿಗಳ ಘೋಷಣೆ ಬಳಿಕ ಕೆಲವು ಬದಲಾವಣೆ ನಿರೀಕ್ಷೆ ಮಾಡಬಹುದು. ಜೆಡಿಎಸ್​ ಗೆ ಕರಾವಳಿ ಭಾಗದಲ್ಲಿ ನೆಲೆ ಇಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಯತ್ನ ಪಟ್ಟರೆ ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಕೂಡ ಪೈಪೋಟಿ ಕೊಡಬಹುದು. ಕಾಂಗ್ರೆಸ್​ ಗೆ ಮೊದಲ ಶತ್ರು ಎಸ್​ ಡಿಪಿಐ ಪಕ್ಷ.

ಸದ್ಯ ಕರಾವಳಿ ಕರ್ನಾಟಕ ಭಾಗದ ಒಟ್ಟು 19 ಕ್ಷೇತ್ರಗಳ ಪೈಕಿ ಬಿಜೆಪಿ 14, ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ..

ಕರಾವಳಿ ಕರ್ನಾಟಕ ಭಾಗದ 19 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 14
ಕಾಂಗ್ರೆಸ್ : 05

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಬೆಳ್ತಂಗಡಿ, ಮೂಡಬಿದರೆ, ಮಂಗಳೂರು ನಾರ್ತ್​, ಮಂಗಳೂರು ಸೌತ್, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯಾ ಕ್ಷೇತ್ರಗಳಿವೆ. ಬಿಜೆಪಿಯ ಭದ್ರಕೋಟೆ. ಹಿಂದುತ್ವ ಅಜೆಂಡಾ ಅತೀ ಹೆಚ್ಚು ವರ್ಕೌಟ್ ಆಗೋದು ಇಲ್ಲೇ. ಸಾಕಷ್ಟು ಬದಲಾವಣೆ ನಿರೀಕ್ಷೆಯಲ್ಲಿ ಕಾಂಗ್ರೆಸ್​ ಇದೆ. ಆದ್ರೆ, ಜೆಡಿಎಸ್​​ ಗೆ ಇಲ್ಲಿ ನೆಲೆ ಇಲ್ಲ.

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 8 ಕ್ಷೇತ್ರಗಳಲ್ಲಿ ಬಿಜೆಪಿ 7 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ದಕ್ಷಿಣ ಕನ್ನಡ 8 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 7
ಕಾಂಗ್ರೆಸ್​ – 1

ಉಡುಪಿ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕರಾವಳಿ ಭಾಗದ ಮತ್ತೊಂದು ಜಿಲ್ಲೆ ಉಡುಪಿ. ಉಡುಪಿ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರ ಬರುತ್ವೆ. ಬೈಂದೂರು, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ಕ್ಷೇತ್ರಗಳು ಉಡುಪಿ ಜಿಲ್ಲೆಗೆ ಬರುತ್ವೆ. ಉಡುಪಿ ಜಿಲ್ಲೆ ಕೂಡ ಬಿಜೆಪಿ ಭದ್ರಕೋಟೆ. ಈ ಬಾರಿ ಬಿಜೆಪಿ ಕೋಟೆಯನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ತಯಾರಿ ನಡೆಸಿದೆ.ಇಲ್ಲೂ ಕೂಡ ಜೆಡಿಎಸ್​ ಗೆ ಅಸ್ಥಿತ್ವ ಇಲ್ಲ. ಅಭ್ಯರ್ಥಿಗಳ ಕೊರತೆ ಎದ್ದು ಕಾಣ್ತಿದೆ. ಹಿಂದುತ್ವ ಅಜೆಂಡಾ ಕೆಲಸ ಮಾಡುತ್ತೆ. ಸಾಕಷ್ಟು ಬದಲಾವಣೆ ನಿರೀಕ್ಷೆಯಲ್ಲಿ ಕಾಂಗ್ರೆಸ್​ ಇದೆ. ಆದ್ರೆ, ಜೆಡಿಎಸ್​​ ಗೆ ಇಲ್ಲಿ ನೆಲೆ ಇಲ್ಲ.

ಸದ್ಯ ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 5 ಕ್ಷೇತ್ರಗಳಲ್ಲಿ ಬಿಜೆಪಿ 3 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 2 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಉಡುಪಿ 5 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 3
ಕಾಂಗ್ರೆಸ್​ – 2

ಉತ್ತರ ಕನ್ನಡದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕರಾವಳಿ ಭಾಗವನ್ನ ಹಂಚಿಕೊಂಡಿರೋ ಮತ್ತೊಂದು ಜಿಲ್ಲೆ ಉತ್ತರ ಕನ್ನಡ. ಉತ್ತರ ಕನ್ನಡ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿವೆ. ಹಳಿಯಾಳ, ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ಕ್ಷೇತ್ರಗಳಲ್ಲಿ ಘಟಾನುಘಟಿ ನಾಯಕರು ಕಣಕ್ಕೆ ಇಳೀತಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಶಿವರಾಂ ಹೆಬ್ಬಾರ್ ಹೀಗೆ ಸಾಕಷ್ಟು ಹಿರಿಯ ನಾಯಕರು ಜಿಲ್ಲೆಯಲ್ಲಿದ್ದಾರೆ. ಜಿಲ್ಲೆಗೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ವಲ್ಲ ಅನ್ನೋದು ಜನರ ಕೂಗು. ಸರ್ಕಾರವೇನೋ ಬಜೆಟ್​​ ನಲ್ಲಿ ಹೇಳಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡ್ತೀವಿ ಎಂದು. ಆದ್ರೆ, ಯಾವ ಸರ್ಕಾರ ಅಧಿಕಾರಕ್ಕೆ ಬರುತ್ತೆ ಮುಂದೆ ಅನ್ನೋದನ್ನ ನೋಡಬೇಕು.

ಸದ್ಯ ಉತ್ತರ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 6 ಕ್ಷೇತ್ರಗಳಲ್ಲಿ ಬಿಜೆಪಿ 4 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 2 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಉತ್ತರ ಕನ್ನಡ 6 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 4
ಕಾಂಗ್ರೆಸ್​ – 2

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ನಗರದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲಬುರಗಿ ಜಿಲ್ಲೆ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉತ್ತರ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss