Sunday, September 8, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂ.1 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಿತ್ತೂರು ಕರ್ನಾಟಕ ಭಾಗಕ್ಕೆ ಒಟ್ಟು 6 ಜಿಲ್ಲೆಗಳ 50 ಕ್ಷೇತ್ರ ಬರುತ್ತವೆ. ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿ. ಸಾಹುಕಾರ್​ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಫೈಟ್ ಇರೋ ಬೆಳಗಾವಿ, ಮಾಜಿ ಸಿಎಂ ಶೆಟ್ಟರ್, ಘಟಾನುಘಟಿ ನಗರು ಇರುವ ಹುಬ್ಬಳ್ಳಿ-ಧಾರವಾಡ, ಯತ್ನಾಳ್, ನಿರಾಣಿ, ಎಂ.ಬಿ. ಪಾಟೀಲ್​, ಕಾರಜೋಳ ಇರುವಂತಹ ಬಾಗಲಕೋಟೆ, ವಿಜಯಪುರ ಜಿಲ್ಲೆ, ಗದಗ, ಒಟ್ಟು 6 ಜಿಲ್ಲೆಗಳು ಕಿತ್ತೂರು ಕರ್ನಾಟಕ ಭಾಗಕ್ಕೆ ಬರುತ್ವೆ.

ಕಿತ್ತೂರು ಕರ್ನಾಟಕದ ಒಟ್ಟು 50 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್ 23, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 25
ಕಾಂಗ್ರೆಸ್ : 23
ಜೆಡಿಎಸ್ : 02

ಬೆಳಗಾವಿಯ 18 ಕ್ಷೇತ್ರಗಳ ಫೆಬ್ರವರಿ ಟ್ರೆಂಡ್ ಹೇಗಿದೆ.?

ಬೆಂಗಳೂರು ಹೊರತುಪಡಿಸಿದ್ರೆ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳಿರೋ ಜಿಲ್ಲೆ ಬೆಳಗಾವಿ. ಸದ್ಯ ಇಡೀ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವರ್ಸಸ್ ರಮೇಶ್ ಜಾರಕಿಹೊಳಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವೈಯುಕ್ತಿಕ ವಾಗ್ದಾಳಿಗಳು ಈಗಾಗ್ಲೇ ಮುಗಿಲು ಮುಟ್ಟಿದ್ದು, ಇಡೀ ಜಿಲ್ಲೆಯಲ್ಲಿ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ನಡುವಿನ ಫೈಟ್ ಎನ್ನುವಂತಾಗಿದೆ. 18 ವಿಧಾನಸಭಾ ಕ್ಷೇತ್ರ ಬರುವ ಬೆಳಗಾವಿಯಲ್ಲಿ ಕರ್ನಾಟಕ ಟಿವಿಯ ಫೆಬ್ರವರಿ ಸಮೀಕ್ಷೆ ಪ್ರಕಾರ ಕಾಂಗ್ರೆಸ್​​ 9 ಹಾಗೂ ಬಿಜೆಪಿ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎರಡೂ ಪಕ್ಷಗಳು ಈ ಬಾರಿ ಸಮಬಲದ ಹೋರಾಟ ನಡೆಸಿದ್ದು, ತಲಾ 9 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿವೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಬೆಳಗಾವಿ 18 ಕ್ಷೇತ್ರ

ಬಿಜೆಪಿ – 9
ಕಾಂಗ್ರೆಸ್​ – 9

ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮಾಶ್ರೀ, ಸಿದ್ದರಾಮಯ್ಯ ಶಾಸಕರೂ ಆಗಿರೋ ಕ್ಷೇತ್ರಗಳನ್ನ ಒಳಗೊಂಡ ಜಿಲ್ಲೆ ಬಾಗಲಕೋಟೆ. ಬಾಗಲಕೋಟೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಪ್ಪ ಅಂದ್ರೆ, ಏಳು ಕ್ಷೇತ್ರಗಳಲ್ಲಿ ಬಿಜೆಪಿ 4 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ. ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ತೀವ್ರ ಪೈಪೋಟಿ ನೀಡಿದೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಬಾಗಲಕೋಟೆ ಜಿಲ್ಲೆ 7 ಕ್ಷೇತ್ರ

ಬಿಜೆಪಿ – 4
ಕಾಂಗ್ರೆಸ್​ – 3
—-
ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಘಟಾನುಘಟಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಬಿ. ಪಾಟೀಲ್​ ಇರುವ ಜಿಲ್ಲೆ ವಿಜಯಪುರ. ವಿಜಯಪುರ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಸಾಕಷ್ಟು ತೀವ್ರ ಹಣಾಹಣೆಯಿಂದ ಕೂಡಿವೆ. ಜೆಡಿಎಸ್ ಕೂಡ ಇಲ್ಲಿ ಪ್ರಾಬಲ್ಯ ಹೊಂದಿದೆ. ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 8 ಕ್ಷೇತ್ರಗಳಲ್ಲಿ ಬಿಜೆಪಿ 3 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ವಿಜಯಪುರ ಜಿಲ್ಲೆ 8 ಕ್ಷೇತ್ರ

ಬಿಜೆಪಿ – 3
ಕಾಂಗ್ರೆಸ್​ – 3
ಜೆಡಿಎಸ್ – 2
—-
ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಘಟಾನುಘಟಿ ನಾಯಕರಾದ ಹೆಚ್​.ಕೆ. ಪಾಟೀಲ್, ಕಳಕಪ್ಪ ಬಂಡಿ, ಸಿಸಿ ಪಾಟೀಲ್​​ ಸ್ಪರ್ಧಿಸುವ ಜಿಲ್ಲೆ ಗದಗ. ಗದಗ ಜಿಲ್ಲೆಯಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿವೆ. ತೀವ್ರ ಹಣಾಹಣೆಯಿಂದ ಕೂಡಿರೋ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ ಫೈಟ್. ರೋಣ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಈ ಬಾರಿ ಮ್ಯಾಜಿಕ್ ಮಾಡ್ತಾರಾ ಅನ್ನೋ ಕುತೂಹಲ, ನಿರೀಕ್ಷೆ ಹೆಚ್ಚಾಗಿದೆ. ಗದಗ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಬಿಜೆಪಿ 2 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದ್ರೆ, ರೋಣದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಪೈಪೋಟಿಯ ಮಧ್ಯೆ ಎಎಪಿಯಿಂದ ಆನೇಕಲ್ ದೊಡ್ಡಯ್ಯ ತೀವ್ರ ಸ್ಪರ್ಧೆ ನೀಡ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಎಪಿ ಮುನ್ನಡೆ ಸಾಧಿಸಿದ್ರೂ ಅಚ್ಚರಿ ಪಡಬೇಕಿಲ್ಲ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಗದಗ ಜಿಲ್ಲೆ 4 ಕ್ಷೇತ್ರ

ಬಿಜೆಪಿ – 2
ಕಾಂಗ್ರೆಸ್​ – 2
—–
ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಘಟಾನುಘಟಿ ನಾಯಕರಾದ ಅರವಿಂದ್ ಬೆಲ್ಲದ್, ವಿನಯ್ ಕುಲಕರ್ಣಿ, ಸಂತೋಷ್ ಲಾಡ್ ಸ್ಪರ್ಧಿಸುವ ಜಿಲ್ಲೆ ಧಾರವಾಡ. ಧಾರವಾಡದಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಫೈಟ್ ಇದೆ. ಆದರೂ ಜೆಡಿಎಸ್ ಕೆಲವು ಕ್ಷೇತ್ರಗಳಲ್ಲಿ ಪೈಪೋಟಿ ನೀಡ್ತಿದೆ. ಇನ್ನು ಎಂಐಎಂ ಪಕ್ಷ ಕೂಡ ಅಭ್ಯರ್ಥಿಗಳನ್ನ ಹಾಕಲು ತಯಾರಿ ನಡೆಸಿದ್ದು, ಧಾರವಾಡದಲ್ಲಿ ಕಾಂಗ್ರೆಸ್​​ಗೆ ಶಾಕ್ ಕೊಡಲು ರೆಡಿಯಾಗಿದೆ. ಸದ್ಯ, ಧಾರವಾಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 8 ಕ್ಷೇತ್ರಗಳಲ್ಲಿ ಬಿಜೆಪಿ 7 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಧಾರವಾಡ ಜಿಲ್ಲೆ 7 ಕ್ಷೇತ್ರ

ಬಿಜೆಪಿ – 4
ಕಾಂಗ್ರೆಸ್​ – 3
—-
ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿ. ಸಿಎಂ ಬೊಮ್ಮಾಯಿಗೆ ತಾವು ಗೆಲ್ಲೋದರ ಜೊತೆ ಜಿಲ್ಲೆಯಲ್ಲಿ ಎಲ್ಲರನ್ನೂ ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ. ಹಾವೇರಿ ಜಿಲ್ಲೆಯಲ್ಲಿ ಒಟ್ಟು 6 ವಿಧಾನಸಭಾ ಕ್ಷೇತ್ರಗಳಿವೆ. ಹಾವೇರಿ ಜಿಲ್ಲೆಯಲ್ಲಿ ಉದಾಸಿ ಕುಟುಂಬ, ನೆಹರೂ ಓಲೇಕಾರ್, ಬಿಸಿ ಪಾಟೀಲ್, ಆರ್ ಶಂಕರ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ಸ್ಪರ್ಧೆ ಮಾಡಲಿದ್ದಾರೆ. ಕಾಂಗ್ರೆಸ್​​ನ ವಿನಯ್ ಕುಲಕರ್ಣಿ, ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿ ಇದೆ. ಆದ್ರೆ, ಇನ್ನೂ ಕನ್ಫರ್ಮ್ ಆಗಿಲ್ಲ.

ಸದ್ಯ, ಹಾವೇರಿ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 6 ಕ್ಷೇತ್ರಗಳಲ್ಲಿ ಬಿಜೆಪಿ 3 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಹಾವೇರಿ ಜಿಲ್ಲೆ 6 ಕ್ಷೇತ್ರ

ಬಿಜೆಪಿ – 3
ಕಾಂಗ್ರೆಸ್​ – 3

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

 

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss