Friday, March 14, 2025

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ಮೈಸೂರು 11 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಲ್ಲಿ 11 ಕ್ಷೇತ್ರ ಬರುತ್ವೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕೀಯಕ್ಕೆ ಬರ್ತಾರಂತೆ ಅನ್ನೋ ಚರ್ಚೆ ಕೂಡ ನಡೀತಿದೆ. ಘಟಾನುಘಟಿಗಳು ಇರುವ ಜಿಲ್ಲೆ. ಅರಮನೆ ನಗರಿ, ಸಾಂಸ್ಕೃತಿಕ ನಗರ. ಇದೇ ಸಿದ್ದರಾಮಯ್ಯ ಸೋತ ಚಾಮುಂಡೇಶ್ವರಿ ಕ್ಷೇತ್ರ, ಸಿದ್ದರಾಮಯ್ಯ ಮಗ ಸ್ಪರ್ಧಿಸೋ ವರುಣಾ ಕ್ಷೇತ್ರ ಇರೋದು ಮೈಸೂರಲ್ಲಿ. ಜೆಡಿಎಸ್, ಕಾಂಗ್ರೆಸ್ ತೀವ್ರ ಪೈಪೋಟಿ ನೀಡುವ ಕ್ಷೇತ್ರಗಳು ಇರುವ ಜಿಲ್ಲೆ. ಬಿಜೆಪಿ ಕೂಡ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಪೈಪೋಟಿ ನೀಡೋಕೆ ತಂತ್ರಗಾರಿಕೆ ಮಾಡ್ತಿದೆ. ಹಳೇ ಮೈಸೂರು ಭಾಗದಲ್ಲಿ ಮಂಡ್ಯಗೆ ಎಷ್ಟು ಪ್ರಾಮುಖ್ಯತೆ ಕೊಡ್ತಿದೆಯೋ ಅಷ್ಟೇ ಪ್ರಾಮುಖ್ಯತೆಯನ್ನ ಮೈಸೂರು ಜಿಲ್ಲೆಗೂ ನೀಡಲಾಗ್ತಿದೆ.

ಸದ್ಯ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 11 ಕ್ಷೇತ್ರಗಳಲ್ಲಿ ಬಿಜೆಪಿ 2, ಕಾಂಗ್ರೆಸ್ 5, ಜೆಡಿಎಸ್ 4 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಮೈಸೂರು 11 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 2
ಕಾಂಗ್ರೆಸ್​ – 5
ಜೆಡಿಎಸ್ – 4

 

ಮೈಸೂರು ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಪಿರಿಯಾಪಟ್ಟಣ : ಕಾಂಗ್ರೆಸ್ ಮುನ್ನಡೆ
ಕೃಷ್ಣರಾಜನಗರ : ಜೆಡಿಎಸ್ ಮುನ್ನಡೆ
ಹುಣಸೂರು : ಜೆಡಿಎಸ್ ಮುನ್ನಡೆ
ಹೆಚ್.ಡಿ. ಕೋಟೆ : ಕಾಂಗ್ರೆಸ್ ಮುನ್ನಡೆ
ನಂಜನಗೂಡು : ಕಾಂಗ್ರೆಸ್ ಮುನ್ನಡೆ
ಚಾಮುಂಡೇಶ್ವರಿ : ಜೆಡಿಎಸ್ ಮುನ್ನಡೆ
ಕೃಷ್ಣರಾಜ : ಬಿಜೆಪಿ ಮುನ್ನಡೆ
ಚಾಮರಾಜ : ಬಿಜೆಪಿ ಮುನ್ನಡೆ
ನರಸಿಂಹರಾಜ : ಕಾಂಗ್ರೆಸ್ ಮುನ್ನಡೆ
ವರುಣಾ : ಕಾಂಗ್ರೆಸ್ ಮುನ್ನಡೆ
ಟಿ.ನರಸೀಪುರ : ಜೆಡಿಎಸ್ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲಬುರಗಿ ಜಿಲ್ಲೆ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಮಗಳೂರು 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss