Political News:
Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂ.1 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.
ಹಳೇ ಮೈಸೂರು ಭಾಗದ 61 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಹಳೇ ಮೈಸೂರು ಭಾಗದ ಒಟ್ಟು 10 ಜಿಲ್ಲೆಗಳ 61 ಕ್ಷೇತ್ರ ಬರುತ್ತವೆ. ತುಂಬಾ ಮಹತ್ವದ ಭಾಗ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೇಲುಗೈ ಸಾಧಿಸೋ ಭಾಗ ಇದು. ಈ ಬಾರಿ ಬಿಜೆಪಿ ಕೂಡ ಹಳೇ ಮೈಸೂರು ಭಾಗಕ್ಕೆ ಲಗ್ಗೆ ಇಡಲು ಸಾಕಷ್ಟು ತಂತ್ರಗಾರಿಕೆ ಮಾಡ್ತಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನರ ಜಿಲ್ಲೆಗಳು ಹಳೇ ಮೈಸೂರು ವ್ಯಾಪ್ತಿಗೆ ಬರುತ್ವೆ.
ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯೋಗೇಶ್ವರ್, ಸುಮಲತಾ ಅಂಬರೀಷ್, ಪ್ರತಾಪ್ ಸಿಂಹ, ದೇವೇಗೌಡರ ಕುಟುಂಬ, ರೇವಣ್ಣ, ನಿಖಿಲ್ ಹೀಗೆ ಸಾಕಷ್ಟು ಖ್ಯಾತ ನಾಮರು ಇರೋದು ಇದೇ ಭಾಗದಲ್ಲಿ.
ಹಳೇ ಮೈಸೂರು ಭಾಗದ ಒಟ್ಟು 61 ಕ್ಷೇತ್ರಗಳ ಪೈಕಿ ಬಿಜೆಪಿ 10, ಕಾಂಗ್ರೆಸ್ 23, ಜೆಡಿಎಸ್ 26, ಪಕ್ಷೇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ..
ಹಳೇ ಮೈಸೂರು ಕರ್ನಾಟಕ 61 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ : 10
ಕಾಂಗ್ರೆಸ್ : 23
ಜೆಡಿಎಸ್ : 26
ಪಕ್ಷೇತರರು : 02
—
ತುಮಕೂರು 11ರಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಹಳೇ ಮೈಸೂರು ಭಾಗದ ಮೊದಲ ಜಿಲ್ಲೆ ತುಮಕೂರು. ತುಮಕೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳು ಬರುತ್ವೆ. ಒಂದ್ ಕಡೆ ನಾನು ಗೆದ್ರೆ ಸಿಎಂ ಆಗ್ತೀನಿ ಅನ್ನೋ ಭರವಸೆಯಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ ಇದ್ದಾರೆ. ಕುಮಾರಸ್ವಾಮಿ ಪಂಚರತ್ನ ಯಾತ್ರೆ ಜೋಶ್ ನಲ್ಲಿದ್ದಾರೆ. ಬಿಜೆಪಿಗೆ ಮುದ್ದಹನುಮೇಗೌಡರು ಹೋಗಿರೋದ್ರಿಂದ ಸ್ವಲ್ಪ ಪಾಲಿಟಿವ್ ಆಗುವ ಲೆಕ್ಕಾಚಾರದಲ್ಲಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ತಿದ್ದಾರೆ. ಮತ್ತೊಂದೆಡೆ ಸಚಿವ ಸೋಮಣ್ಣ ಮಗ ಅರುಣ್ ಸೋಮಣ್ಣ ಗುಬ್ಬಿಗೆ ಬರ್ತಾರಂತೆ ಅನ್ನೋ ಚರ್ಚೆ. ಹೀಗೆ ಸಾಕಷ್ಟು ಕುತೂಹಲದ ಜೊತೆ 11 ಕ್ಷೇತ್ರಗಳಲ್ಲಿ ಯಾರು ಹೆಚ್ಚು ಗೆಲ್ತಾರೋ ಅವರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಅನ್ನೋ ನಂಬಿಕೆ ಬೇರೆ ಇದೆ.
ಸದ್ಯ ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 11 ಕ್ಷೇತ್ರಗಳಲ್ಲಿ ಬಿಜೆಪಿ 2 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ತುಮಕೂರು 11 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 2
ಕಾಂಗ್ರೆಸ್ – 3
ಜೆಡಿಎಸ್ – 6
—
ಚಿಕ್ಕಬಳ್ಳಾಪುರ 5 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಹಳೇ ಮೈಸೂರು ಭಾಗದ, ಬೆಂಗಳೂರು ಪಕ್ಕದಲ್ಲೇ ಇರೋ ಜಿಲ್ಲೆ ಚಿಕ್ಕಬಳ್ಳಾಪುರ. ಆಂಧ್ರ ರಾಜ್ಯಕ್ಕೆ ಗಡಿಯನ್ನ ಹಂಚಿಕೊಂಡಿರೋ ಜಿಲ್ಲೆ. ಚಿಕ್ಕಬಳ್ಳಾಪುರದಲ್ಲಲಿ 5 ವಿಧಾನಸಭಾ ಕ್ಷೇತ್ರ ಬರುತ್ವೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ ಇಲ್ಲಿನ ಕ್ಷೇತ್ರಗಳು. ಕೃಷಿ ಮೂಲ ಕಸುಬು. ದ್ರಾಕ್ಷಿ, ರೇಷ್ಮೆ, ತರಕಾರಿ, ಹಾಲು ಉತ್ಪಾದನೆ ಜಾಸ್ತಿ. ಇತ್ತೀಚೆಗೆ ಮಳೆ ಆಗಿದ್ದರಿಂದ ಅಂತರ್ ಜಲ ಚೆನ್ನಾಗಿ ವೃದ್ಧಿಯಾಗಿದೆ. ರೈತರೇ ಹೆಚ್ಚಿರುವ ಜಿಲ್ಲೆ. ಡಾ.ಕೆ. ಸುಧಾಕರ್ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗಿ ಪ್ರಭಾವಿ ಮಂತ್ರಿ ಆಗಿದ್ದಾರೆ. ಗೌರಿಬಿದನೂರು ಹಾಗೂ ಬಾಗೇಪಲ್ಲಿಯಲ್ಲಿ ಪಕ್ಷೇತರರ ಅಬ್ಬರ ಜೋರಾಗಿದೆ.
ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 5 ಕ್ಷೇತ್ರಗಳಲ್ಲಿ ಬಿಜೆಪಿ 1 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 1 ಕ್ಷೇತ್ರ ಹಾಗೂ ಎರಡು ಕ್ಷೇತ್ರದಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ 5 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 1
ಕಾಂಗ್ರೆಸ್ – 1
ಜೆಡಿಎಸ್ – 1
ಪಕ್ಷೇತರರು – 2
—
ಕೋಲಾರದ 6 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಹಳೇ ಮೈಸೂರು ಭಾಗದ, ಬೆಂಗಳೂರು ಪಕ್ಕದಲ್ಲೇ ಇರೋ ಜಿಲ್ಲೆ ಕೋಲಾರ. ಆಂಧ್ರ ಹಾಗೂ ತಮಿಳುನಾಡಿಗೆ ಗಡಿ ಹಂಚಿಕೊಂಡಿರೋ ಕೋಲಾರ ಈ ಬಾರಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡೋದಾಗಿ ಹೇಳಿರೋದು ರಾಜ್ಯ ರಾಜಕೀಯದಲ್ಲೇ ಸಂಚಲನ ಉಂಟು ಮಾಡಿದೆ. ಹೀಗಾಗಿ ಕೋಲಾರ ಕ್ಷೇತ್ರದ ಜೊತೆ ಕೋಲಾರ ಜಿಲ್ಲೆ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.
ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ, ಕೋಲಾರ ಹಾಗೂ ಮಾಲೂರು. ಕೋಲಾರ ಜಿಲ್ಲೆಯಲ್ಲಿ ಬರುವ 6 ಕ್ಷೇತ್ರಗಳು. ಕಳೆದ ಬಾರಿ ಬಿಜೆಪಿ ಒಂದೇ ಒಂದು ಸ್ಥಾನ ಗೆದ್ದಿರಲಿಲ್ಲ. ಹೇಗಾದ್ರೂ ಮಾಡಿ ಮತ್ತೆ ಖಾತೆ ತೆರೆಯಬೇಕು ಅಂತ ಬಿಜೆಪಿ ನಾಯಕರು ಕಸರತ್ತು ಮಾಡ್ತಿದ್ದಾರೆ. ಸಿದ್ದರಾಮಯ್ಯ ಆಗಮನದಿಂದ ಕಾಂಗ್ರೆಸ್ ಜಾಸ್ತಿ ಸ್ಥಾನ ಗೆಲ್ಲಲು ತಂತ್ರಗಾರಿಕೆ ಮಾಡ್ತಿದೆ. ಜೆಡಿಎಸ್ ಕೂಡ ಹೆಚ್ಚು ಕ್ಷೇತ್ರ ಗೆಲ್ಲಲು ತಯಾರಿ ಮಾಡಿದೆ.
ಸದ್ಯ ಕೋಲಾರ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ 4 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಮಾಲೂರು, ಕೆಜಿಎಫ್, ಕೋಲಾರ, ಬಂಗಾರಪೇಟೆಯಲ್ಲಿ ಫೈಟ್ ಕೊಡ್ತಿದೆ. ಆದ್ರೆ, ಟಿಕೆಟ್ ವಿಚಾರವಾಗಿ ಗೊಂದಲ ಇರೋದ್ರಿಂದ ಸದ್ಯಕ್ಕೆ ಹಿನ್ನಡೆ ಅನುಭವಿಸಿದೆ.
ಕೋಲಾರ 6 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 0
ಕಾಂಗ್ರೆಸ್ – 4
ಜೆಡಿಎಸ್ – 2
—
ಬೆಂಗಳೂರು ಗ್ರಾಂ. 4 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬೆಂಗಳೂರು ನಗರಕ್ಕೆ ಅಂಟಿಕೊಂಡಿರೋ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 4 ಕ್ಷೇತ್ರಗಳಿವೆ. ಬೆಂಗಳೂರಿಗೆ ಅಂಟಿಕೊಂಡಿದ್ದರೂ ಅಭಿವೃದ್ಧಿ ವಿಚಾರದಲ್ಲಿ ನಾಲ್ಕು ಕ್ಷೇತ್ರಗಳು ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯಬೇಕಿದ್ದ ಪಟ್ಟಣಗಳು ಅಭಿವೃದ್ಧಿ ಇಲ್ಲದೇ ಹಾಗೇ ಇವೆ. ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳು ಗ್ರಾಮಾಂತರಕ್ಕೆ ಬರುತ್ವೆ. ಎಂಟಿಬಿ ನಾಗರಾಜ್, ಶರತ್ ಬಚ್ಚೇಗೌಡ ಜಟಾಪಟಿ ಆಗಾಗ ಸುದ್ದಿ ಆಗುತ್ಲೇ ಇರುತ್ತೆ. 4 ಕ್ಷೇತ್ರಗಳಲ್ಲಿ ಬಿಜೆಪಿ ಒಂದೂ ಗೆದ್ದಿಲ್ಲ. ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕು ಅಂತ ಬಿಜೆಪಿ ಪ್ಲಾನ್ ಮಾಡ್ತಿದೆ.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ನಾಯಕ ಧೀರಜ್ ಮುನಿರಾಜುಗೆ ಟಿಕೆಟ್ ಫಿಕ್ಸ್ ಆಗಲಿದ್ದು, ಮುನ್ನಡೆ ಕಾಯ್ದುಕೊಂಡಿದ್ದಾರೆ.
ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಮಾತ್ರ ಮುನ್ನಡೆಯನ್ನ ಕಾಯ್ದುಕೊಂಡಿದೆ.
ಬೆಂಗಳೂರು ಗ್ರಾ. 4 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 1
ಕಾಂಗ್ರೆಸ್ – 1
ಜೆಡಿಎಸ್ – 2
—
ರಾಮನಗರ 4 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮದಗಜಗಳ ಕಾದಾಟದ ಜಿಲ್ಲೆ ರಾಮನಗರ. ಬೆಂಗಳೂರು ಪಕ್ಕದಲ್ಲೇ ಇದೆ.. ಸಿಎಂ ಕುರ್ಚಿಗಾಗಿ ಪೈಪೋಟಿಗೆ ಬಿದ್ದಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡ್ತಿರೋ ಜಿಲ್ಲೆ. ನಿಖಿಲ್ ಕುಮಾರಸ್ವಾಮಿ ಮತ್ತೆ ಅದೃಷ್ಟ ಪರೀಕ್ಷೆ ಇಳಿದಿರೋ ಕ್ಷೇತ್ರ ಹಾಗೂ ಬಿಜೆಪಿಯಿಂದ ಯೋಗೇಶ್ವರ್ ಕಣಕ್ಕೆ ಇಳಿಯೋ ಕ್ಷೇತ್ರ ಬರೋದು ರಾಮನಗರ ಜಿಲ್ಲೆಯಲ್ಲೇ. ರಾಮನಗರ, ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ಕ್ಷೇತ್ರಗಳು ರಾಮನಗರ ಜಿಲ್ಲೆಯಲ್ಲಿ ಬರುತ್ವೆ. ಬಿಜೆಪಿ ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಮ್ಯಾಜಿಕ್ ಮಾಡಲು ತಂತ್ರಗಾರಿಕೆ ಮಾಡ್ತಿದೆ. ನೋ ಫಿಕ್ಸಿಂಗ್ , ಓನ್ಲಿ ಫೈಟಿಂಗ್ ಅಂತ ಹೋರಾಟಕ್ಕೆ ಇಳಿದಂತೆ ಕಾಣಿಸ್ತಿದೆ.
ಸದ್ಯ ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಚನ್ನಪಟ್ಟಣದಲ್ಲಿ ತೀವ್ರ ಪೈಪೋಟಿ ನೀಡ್ತಿದೆ.. ಚನ್ನಪಟ್ಟಣದಲ್ಲಿ ಹೆಚ್ ಡಿ ಕುಮಾರಸ್ವಾಮಿ ವರ್ಸಸ್ ಯೋಗೇಶ್ವರ್, ರಾಮನಗರದಲ್ಲಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ, ಕನಕಪುರದಲ್ಲಿ ಕಾಂಗ್ರೆಸ್ ನಿಂದ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡ್ತಿದ್ದಾರೆ. ಮಾಗಡಿಯಲ್ಲಿ ಕಾಂಗ್ರೆಸ್ ನಿಂದ ಬಾಲಕೃಷ್ಣ ವರ್ಸಸ್ ಜೆಡಿಎಸ್ ನಿಂದ ಮಂಜುನಾಥ್ ಪೈಪೋಟಿಗೆ ಇಳಿಯಲಿದ್ದಾರೆ.
ರಾಮನಗರ 4 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 0
ಕಾಂಗ್ರೆಸ್ – 1
ಜೆಡಿಎಸ್ – 3
—
ಮಂಡ್ಯ 7 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮಂಡ್ಯ ಅಂದ್ರೆ ಇಂಡಿಯಾ. ಮಂಡ್ಯ ಎಲೆಕ್ಷನ್ ಒಂದ್ ರೀತಿ ಮಹಾಯುದ್ಧದಂತೆ. ಅದ್ರಲ್ಲೂ ಈ ಬಾರಿ ಜೆಡಿಎಸ್ ವರ್ಸಸ್ ಕಾಂಗ್ರೆಸ್ ಜೊತೆ ಬಿಜೆಪಿ ಕೂಡ ಎಲೆಕ್ಷನ್ ಅನ್ನ ಗಂಭೀರವಾಗಿ ಪರಿಗಣಿಸಿದೆ. ಅಮಿತ್ ಶಾ ಸಮಾವೇಶದ ಬಳಿಕ ಬಿಜೆಪಿ ಕೂಡ ಸೇರಿಗೆ ಸವ್ವಾಸೇರು ಎನ್ನುವಂತೆ ಪೈಪೋಟಿ ನೀಡಲು ತಯಾರಿ ನಡೆಸಿದೆ. ಸುಮಲತಾ ಬಿಜೆಪಿಗೆ ಬರ್ತಾರಂತೆ ಅನ್ನೋ ಚರ್ಚೆ ಇದೆ. ಹೀಗಾಗಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ ಮಂಡ್ಯ ಜಿಲ್ಲೆ.
ಸದ್ಯ ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ 3 ಕ್ಷೇತ್ರ, ಜೆಡಿಎಸ್ 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ನೆಲೆಯೂರಲಿ ಪ್ರಯತ್ನ ಮಾಡ್ತಿದೆ.
ಮಂಡ್ಯ 7 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 0
ಕಾಂಗ್ರೆಸ್ – 3
ಜೆಡಿಎಸ್ – 4
—
ಹಾಸನ 7 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಗೌಡರ ಕೋಟೆ ಹಾಸನ ಜಿಲ್ಲೆ. ಹಾಸನ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರ ಇವೆ. ಜೆಡಿಎಸ್ ಹಾಗೂ ಗೌಡರ ಭದ್ರಕೋಟೆ ಅನ್ನೋ ಖ್ಯಾತಿ ಇದೆ. ಪ್ರಜ್ವಲ್ ರೇವಣ್ಣ ಜೆಡಿಎಸ್ ನ ಏಕೈಕ ಸಂಸದರು ಹಾಸನದಿಂದ ಆಯ್ಕೆ ಆಗಿದ್ದಾರೆ. ಹಾಸನಕ್ಕೆ ನಾನೇ ಸಿಎಂ ಅಂತಿದ್ದ ಹೆಚ್ ಡಿ ರೇವಣ್ಣಗೆ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಸವಾಲ್ ಹಾಕಿದ್ದಾರೆ. ಹಾಸನಕ್ಕೆ ನಾನೇ ಸಿಎಂ ಅಂತಿದ್ದಾರೆ ಬಿಜೆಪಿ ಶಾಸಕ ಪ್ರೀತಂ ಗೌಡ. ಹಾಸನ ಟಿಕೆಟ್ ವಿಚಾರವಾಗಿ ಜೆಡಿಎಸ್ ನಲ್ಲಿ ಸಾಕಷ್ಟು ಗೊಂದಲ ಇದೆ. ಜೆಡಿಎಸ್ ವಿರುದ್ಧ ರಾಜಕೀಯ ಮಾಡ್ತಿದ್ದ ಎ.ಮಂಜು ಈಗ ಜೆಡಿಎಸ್ ಅಭ್ಯರ್ಥಿ ಆಗ್ತಿದ್ದಂತೆ ಅರಕಲಗೂಡಿಂದ. ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಜೆಡಿಎಸ್ ಬಿಡ್ತಿದ್ದಾರೆ.. ಒಂದ್ ರೀತಿ ಮಿಕ್ಸ್ ಮಸಾಲಾ ಆಗಿದೆ ಹಾಸನ ರಾಜಕೀಯ.
ಇದರ ಮಧ್ಯೆ, ಸದ್ಯ ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 7 ಕ್ಷೇತ್ರಗಳಲ್ಲಿ ಬಿಜೆಪಿ 2, ಕಾಂಗ್ರೆಸ್ 2 ಕ್ಷೇತ್ರ, ಜೆಡಿಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಹಾಸನ 7 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 2
ಕಾಂಗ್ರೆಸ್ – 2
ಜೆಡಿಎಸ್ – 3
—
ಕೊಡಗು 2 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮೈಸೂರು ಲೋಕಸಭೆ ವ್ಯಾಪ್ತಿಗೆ ಬರುವ ಕೊಡಗು ಜಿಲ್ಲೆಯಲ್ಲಿ ಎರಡು ಕ್ಷೇತ್ರ ಇವೆ. ಮಡಿಕೇರಿ ಹಾಗೂ ವೀರಾಜಪೇಟೆ. ಬಿಜೆಪಿ ಭದ್ರಕೋಟೆ. ಈ ಬಾರಿ ಬಿಜೆಪಿಗೆ ಡಿಚ್ಚಿ ಕೊಡಲು ಕಾಂಗ್ರೆಸ್, ಜೆಡಿಎಸ್ ತಯಾರಿ ನಡೆಸಿವೆ. ಅಪ್ಪಚ್ಚು ರಂಜನ್ ಹಾಗೂ ಬೋಪಯ್ಯ ಸೋಲಿಸಲು ಸಾಕಷ್ಟು ತಯಾರಿ ನಡೀತಿದೆ.
ಸದ್ಯ ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 2 ಕ್ಷೇತ್ರಗಳಲ್ಲಿ ಬಿಜೆಪಿ 1, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕೊಡಗು 2 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 1
ಕಾಂಗ್ರೆಸ್ – 1
—
ಮೈಸೂರು 11 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಲ್ಲಿ 11 ಕ್ಷೇತ್ರ ಬರುತ್ವೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕೀಯಕ್ಕೆ ಬರ್ತಾರಂತೆ ಅನ್ನೋ ಚರ್ಚೆ ಕೂಡ ನಡೀತಿದೆ. ಘಟಾನುಘಟಿಗಳು ಇರುವ ಜಿಲ್ಲೆ. ಅರಮನೆ ನಗರಿ, ಸಾಂಸ್ಕೃತಿಕ ನಗರ. ಇದೇ ಸಿದ್ದರಾಮಯ್ಯ ಸೋತ ಚಾಮುಂಡೇಶ್ವರಿ ಕ್ಷೇತ್ರ, ಸಿದ್ದರಾಮಯ್ಯ ಮಗ ಸ್ಪರ್ಧಿಸೋ ವರುಣಾ ಕ್ಷೇತ್ರ ಇರೋದು ಮೈಸೂರಲ್ಲಿ. ಜೆಡಿಎಸ್, ಕಾಂಗ್ರೆಸ್ ತೀವ್ರ ಪೈಪೋಟಿ ನೀಡುವ ಕ್ಷೇತ್ರಗಳು ಇರುವ ಜಿಲ್ಲೆ. ಬಿಜೆಪಿ ಕೂಡ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಪೈಪೋಟಿ ನೀಡೋಕೆ ತಂತ್ರಗಾರಿಕೆ ಮಾಡ್ತಿದೆ. ಹಳೇ ಮೈಸೂರು ಭಾಗದಲ್ಲಿ ಮಂಡ್ಯಗೆ ಎಷ್ಟು ಪ್ರಾಮುಖ್ಯತೆ ಕೊಡ್ತಿದೆಯೋ ಅಷ್ಟೇ ಪ್ರಾಮುಖ್ಯತೆಯನ್ನ ಮೈಸೂರು ಜಿಲ್ಲೆಗೂ ನೀಡಲಾಗ್ತಿದೆ.
ಸದ್ಯ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 11 ಕ್ಷೇತ್ರಗಳಲ್ಲಿ ಬಿಜೆಪಿ 2, ಕಾಂಗ್ರೆಸ್ 5, ಜೆಡಿಎಸ್ 4 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಮೈಸೂರು 11 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 2
ಕಾಂಗ್ರೆಸ್ – 5
ಜೆಡಿಎಸ್ – 4
—
ಚಾಮರಾಜನಗರ 4 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಮೈಸೂರುಗೆ ಅಂಟಿಕೊಂಡಿದ್ದರೂ, ತಮಿಳುನಾಡು ಹಾಗೂ ಕೇರಳ ಜೊತೆ ಗಡಿ ಹಂಚಿಕೊಂಡಿರೋ ಚಾಮರಾಜನಗರ ಜಿಲ್ಲೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿಯಾಗಿಲ್ಲ. ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ ನಾಲ್ಕು ಕ್ಷೇತ್ರಗಳು ಜಿಲ್ಲೆಗೆ ಬರುತ್ವೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಓಡಾಟ, ಸೋಮಣ್ಣ ಅವರ ಓಡಾಟ ಜೋರಾಗಿದೆ. ಇದರಿಂದ ಬಿಜೆಪಿ ಒಂದ್ ರೀತಿ ಶಕ್ತಿ ಬಂದಂತೆ ಆಗ್ತಿದೆ. ಆದ್ರೆ, ಯಾರು ಅಭ್ಯರ್ಥಿಗಳು ಅನ್ನೋದು ಇನ್ನೂ ಇತ್ಯರ್ಥ ಆಗಿಲ್ಲ.. ಧ್ರುವನಾರಾಯಣ, ಪುಟ್ಟರಂಗಶೆಟ್ಟಿ, ಮಹದೇವಪ್ರಸಾದ್, ಎನ್ ಮಹೇಶ್, ಪ್ರಭಾವ ಜೋರಾಗಿಯೇ ಇದೆ.
ಸದ್ಯ ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಬಿಜೆಪಿ 1, ಕಾಂಗ್ರೆಸ್ 2, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಚಾಮರಾಜನಗರ 4 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್
ಬಿಜೆಪಿ – 1
ಕಾಂಗ್ರೆಸ್ – 2
ಜೆಡಿಎಸ್ – 1
—–
ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.
ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.
===
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲಬುರಗಿ ಜಿಲ್ಲೆ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೋಲಾರ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?