Tuesday, July 22, 2025

Latest Posts

224 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಮತ್ತೆ ಅತಂತ್ರನಾ.? ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ಒಟ್ಟಾರೆಯಾಗಿ 224 ಕ್ಷೇತ್ರಗಳ ಕರ್ನಾಟಕ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 95, ಕಾಂಗ್ರೆಸ್ 86, ಜೆಡಿಎಸ್ 40 ಹಾಗೂ ಇತೆರೆ 3 ಕ್ಷೇತ್ರಗಳಲ್ಲಿ ಸದ್ಯ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ. ಇನ್ನೂ ಅಭ್ಯರ್ಥಿಗಳು ಫೈನಲ್ ಆಗಿಲ್ಲ. ಚುನಾವಣೆ ಘೋಷಣೆಯಾಗಿಲ್ಲ. ಇದು ಈ ತಿಂಗಳ ಅಂದ್ರೆ ಫೆಬ್ರವರಿ ಟ್ರೆಂಡ್ ಮಾತ್ರ. ಮುಂದಿನ ದಿನಗಳಲ್ಲಿ ಮತ್ತಷ್ಟು ಬದಲಾವಣೆ ಆಗಬಹುದು. ಇದೇ ಫೈನಲ್ ಅಲ್ಲ.

ಕರ್ನಾಟಕ ಕುರುಕ್ಷೇತ್ರ
ಕರ್ನಾಟಕ ಟಿವಿಯ 224 ಕ್ಷೇತ್ರಗಳ ಫೆಬ್ರವರಿ ಟ್ರೆಂಡ್

ಬಿಜೆಪಿ – 95
ಕಾಂಗ್ರೆಸ್​ – 86
ಜೆಡಿಎಸ್ – 40
ಇತರೆ – 3
—-
ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಿತ್ತೂರು ಕರ್ನಾಟಕ ಭಾಗಕ್ಕೆ ಒಟ್ಟು 6 ಜಿಲ್ಲೆಗಳ 50 ಕ್ಷೇತ್ರ ಬರುತ್ತವೆ. ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿ. ಸಾಹುಕಾರ್​ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಫೈಟ್ ಇರೋ ಬೆಳಗಾವಿ, ಮಾಜಿ ಸಿಎಂ ಶೆಟ್ಟರ್, ಘಟಾನುಘಟಿ ನಗರು ಇರುವ ಹುಬ್ಬಳ್ಳಿ-ಧಾರವಾಡ, ಯತ್ನಾಳ್, ನಿರಾಣಿ, ಎಂ.ಬಿ. ಪಾಟೀಲ್​, ಕಾರಜೋಳ ಇರುವಂತಹ ಬಾಗಲಕೋಟೆ, ವಿಜಯಪುರ ಜಿಲ್ಲೆ, ಗದಗ, ಒಟ್ಟು 6 ಜಿಲ್ಲೆಗಳು ಕಿತ್ತೂರು ಕರ್ನಾಟಕ ಭಾಗಕ್ಕೆ ಬರುತ್ವೆ.

ಕಿತ್ತೂರು ಕರ್ನಾಟಕದ ಒಟ್ಟು 50 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್ 23, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಕಿತ್ತೂರು ಕರ್ನಾಟಕ 50 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 25
ಕಾಂಗ್ರೆಸ್ : 23
ಜೆಡಿಎಸ್ : 02

ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಕಲ್ಯಾಣ ಕರ್ನಾಟಕ ಭಾಗಕ್ಕೆ ಒಟ್ಟು 7 ಜಿಲ್ಲೆಗಳ 41 ಕ್ಷೇತ್ರ ಬರುತ್ತವೆ. ಶ್ರೀರಾಮುಲು, ಜನಾರ್ದನ ರೆಡ್ಡಿ, ಆನಂದ್ ಸಿಂಗ್, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಸೇರಿದಂತೆ ಘಟಾನುಘಟಿ ನಾಯಕರು ಸ್ಪರ್ಧೆ ಮಾಡುವ ಕ್ಷೇತ್ರಗಳು ಈ ಭಾಗದಲ್ಲಿವೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕಕ್ಕೆ ಬರುತ್ವೆ.

ಕಲ್ಯಾಣ ಕರ್ನಾಟಕದ ಒಟ್ಟು 41 ಕ್ಷೇತ್ರಗಳ ಪೈಕಿ ಬಿಜೆಪಿ 13, ಕಾಂಗ್ರೆಸ್ 21, ಜೆಡಿಎಸ್ 6, ಕೆಆರ್​ ಪಿಪಿ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಕಲ್ಯಾಣ ಕರ್ನಾಟಕ 41 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 13
ಕಾಂಗ್ರೆಸ್ : 21
ಜೆಡಿಎಸ್ : 06
ಕೆಆರ್​ ಪಿಪಿ : 01

ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಧ್ಯ ಕರ್ನಾಟಕದಲ್ಲಿ ನಾಲ್ಕು ಜಿಲ್ಲೆಗಳಿವೆ. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು. ಮಲೆನಾಡು, ಅರೆ ಮಲೆನಾಡು, ಬಯಲುಸೀಮೆ ಎಲ್ಲವೂ ಈ ಮಧ್ಯ ಕರ್ನಾಟಕ ಭಾಗದಲ್ಲಿವೆ. ನಾಲ್ಕು ಜಿಲ್ಲೆಗಳಿಂದ 25 ಕ್ಷೇತ್ರಗಳು ಈ ಭಾಗದಲ್ಲಿವೆ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಸಿಟಿ ರವಿ, ಶಾಮನೂರು ಶಿವಶಂಕರಪ್ಪ, ತಿಪ್ಪಾರೆಡ್ಡಿ, ದತ್ತಾ, ಪೂರ್ಣಿಮಾ ಶ್ರೀನಿವಾಸ್, ಚಂದ್ರಪ್ಪ ಸೇರಿದಂತೆ ಹಲವು ನಾಯಕರು ಇರುವ ಭಾಗ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳು ಪೈಪೋಟಿ ನಡೆಸುವ ಕ್ಷೇತ್ರಗಳು ಈ ಭಾಗದಲ್ಲಿವೆ.

ಸದ್ಯ ಮಧ್ಯೆ ಕರ್ನಾಟಕ ಭಾಗದ ಒಟ್ಟು 25 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 4, ಜೆಡಿಎಸ್ 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ..

ಮಧ್ಯೆ ಕರ್ನಾಟಕ ಭಾಗದ 25 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 17
ಕಾಂಗ್ರೆಸ್ : 04
ಜೆಡಿಎಸ್ : 04

ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿಗರ ಭದ್ರಕೋಟೆ, ಕರಾವಳಿ ಭಾಗ. ಕರಾವಳಿಯಲ್ಲಿ 3 ಜಿಲ್ಲೆ ಬರುತ್ತೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ. ಮೂರು ಜಿಲ್ಲೆಗಳಿಂದ ಒಟ್ಟು 19 ಕ್ಷೇತ್ರಗಳಿವೆ. ಕರಾವಳಿ ಭಾಗ ಬಿಜೆಪಿಗರ ಭದ್ರಕೋಟೆ. ಹಿಂದುತ್ವವೇ ಇಲ್ಲಿನ ಪ್ರಮುಖ ಅಜೆಂಡಾ ಹಾಗೂ ಅಸ್ತ್ರ. ಕಾಂಗ್ರೆಸ್ ಈ ಬಾರಿ ಕೆಲವು ಕ್ಷೇತ್ರ ಗೆಲ್ಲೋಕೆ ತಯಾರಿ ನಡೆಸ್ತಿದೆ. ಅಭ್ಯರ್ಥಿಗಳ ಘೋಷಣೆ ಬಳಿಕ ಕೆಲವು ಬದಲಾವಣೆ ನಿರೀಕ್ಷೆ ಮಾಡಬಹುದು. ಜೆಡಿಎಸ್​ ಗೆ ಕರಾವಳಿ ಭಾಗದಲ್ಲಿ ನೆಲೆ ಇಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಯತ್ನ ಪಟ್ಟರೆ ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಕೂಡ ಪೈಪೋಟಿ ಕೊಡಬಹುದು. ಕಾಂಗ್ರೆಸ್​ ಗೆ ಮೊದಲ ಶತ್ರು ಎಸ್​ ಡಿಪಿಐ ಪಕ್ಷ.

ಸದ್ಯ ಕರಾವಳಿ ಕರ್ನಾಟಕ ಭಾಗದ ಒಟ್ಟು 19 ಕ್ಷೇತ್ರಗಳ ಪೈಕಿ ಬಿಜೆಪಿ 14, ಕಾಂಗ್ರೆಸ್ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ..

ಕರಾವಳಿ ಕರ್ನಾಟಕ ಭಾಗದ 19 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 14
ಕಾಂಗ್ರೆಸ್ : 05

ಹಳೇ ಮೈಸೂರು ಭಾಗದ 61 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಹಳೇ ಮೈಸೂರು ಭಾಗದ ಒಟ್ಟು 10 ಜಿಲ್ಲೆಗಳ 61 ಕ್ಷೇತ್ರ ಬರುತ್ತವೆ. ತುಂಬಾ ಮಹತ್ವದ ಭಾಗ. ಜೆಡಿಎಸ್ ಹಾಗೂ ಕಾಂಗ್ರೆಸ್​ ಮೇಲುಗೈ ಸಾಧಿಸೋ ಭಾಗ ಇದು. ಈ ಬಾರಿ ಬಿಜೆಪಿ ಕೂಡ ಹಳೇ ಮೈಸೂರು ಭಾಗಕ್ಕೆ ಲಗ್ಗೆ ಇಡಲು ಸಾಕಷ್ಟು ತಂತ್ರಗಾರಿಕೆ ಮಾಡ್ತಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಮಡಿಕೇರಿ, ಮೈಸೂರು, ಚಾಮರಾಜನರ ಜಿಲ್ಲೆಗಳು ಹಳೇ ಮೈಸೂರು ವ್ಯಾಪ್ತಿಗೆ ಬರುತ್ವೆ.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್​ ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯೋಗೇಶ್ವರ್, ಸುಮಲತಾ ಅಂಬರೀಷ್, ಪ್ರತಾಪ್ ಸಿಂಹ, ದೇವೇಗೌಡರ ಕುಟುಂಬ, ರೇವಣ್ಣ, ನಿಖಿಲ್ ಹೀಗೆ ಸಾಕಷ್ಟು ಖ್ಯಾತ ನಾಮರು ಇರೋದು ಇದೇ ಭಾಗದಲ್ಲಿ.

ಹಳೇ ಮೈಸೂರು ಭಾಗದ ಒಟ್ಟು 61 ಕ್ಷೇತ್ರಗಳ ಪೈಕಿ ಬಿಜೆಪಿ 10, ಕಾಂಗ್ರೆಸ್ 23, ಜೆಡಿಎಸ್ 26, ಪಕ್ಷೇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ..

ಹಳೇ ಮೈಸೂರು ಕರ್ನಾಟಕ 61 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್

ಬಿಜೆಪಿ : 10
ಕಾಂಗ್ರೆಸ್ : 23
ಜೆಡಿಎಸ್ : 26
ಪಕ್ಷೇತರರು : 02

ಸದ್ಯ ಬೆಂಗಳೂರು ನಗರದ 28 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 28 ಕ್ಷೇತ್ರಗಳಲ್ಲಿ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 2 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬೆಂಗಳೂರು 28 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 16
ಕಾಂಗ್ರೆಸ್​ – 10
ಜೆಡಿಎಸ್ – 2

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಳೇ ಮೈಸೂರು ಭಾಗದ 61 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ನಗರದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲಬುರಗಿ ಜಿಲ್ಲೆ 9 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಮಗಳೂರು 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಳ್ಳಾರಿ-ವಿಜಯನಗರ 10 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

 

- Advertisement -

Latest Posts

Don't Miss