Sunday, September 8, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ರಾಮನಗರ 4 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮದಗಜಗಳ ಕಾದಾಟದ ಜಿಲ್ಲೆ ರಾಮನಗರ. ಬೆಂಗಳೂರು ಪಕ್ಕದಲ್ಲೇ ಇದೆ.. ಸಿಎಂ ಕುರ್ಚಿಗಾಗಿ ಪೈಪೋಟಿಗೆ ಬಿದ್ದಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡ್ತಿರೋ ಜಿಲ್ಲೆ. ನಿಖಿಲ್ ಕುಮಾರಸ್ವಾಮಿ ಮತ್ತೆ ಅದೃಷ್ಟ ಪರೀಕ್ಷೆ ಇಳಿದಿರೋ ಕ್ಷೇತ್ರ ಹಾಗೂ ಬಿಜೆಪಿಯಿಂದ ಯೋಗೇಶ್ವರ್ ಕಣಕ್ಕೆ ಇಳಿಯೋ ಕ್ಷೇತ್ರ ಬರೋದು ರಾಮನಗರ ಜಿಲ್ಲೆಯಲ್ಲೇ. ರಾಮನಗರ, ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ಕ್ಷೇತ್ರಗಳು ರಾಮನಗರ ಜಿಲ್ಲೆಯಲ್ಲಿ ಬರುತ್ವೆ. ಬಿಜೆಪಿ ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಮ್ಯಾಜಿಕ್ ಮಾಡಲು ತಂತ್ರಗಾರಿಕೆ ಮಾಡ್ತಿದೆ. ನೋ ಫಿಕ್ಸಿಂಗ್ , ಓನ್ಲಿ ಫೈಟಿಂಗ್ ಅಂತ ಹೋರಾಟಕ್ಕೆ ಇಳಿದಂತೆ ಕಾಣಿಸ್ತಿದೆ.

ಸದ್ಯ ರಾಮನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ 1 ಕ್ಷೇತ್ರ, ಜೆಡಿಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ ಚನ್ನಪಟ್ಟಣದಲ್ಲಿ ತೀವ್ರ ಪೈಪೋಟಿ ನೀಡ್ತಿದೆ.. ಚನ್ನಪಟ್ಟಣದಲ್ಲಿ ಹೆಚ್​ ಡಿ ಕುಮಾರಸ್ವಾಮಿ ವರ್ಸಸ್ ಯೋಗೇಶ್ವರ್, ರಾಮನಗರದಲ್ಲಿ ಜೆಡಿಎಸ್​​ ನಿಂದ ನಿಖಿಲ್ ಕುಮಾರಸ್ವಾಮಿ, ಕನಕಪುರದಲ್ಲಿ ಕಾಂಗ್ರೆಸ್​ ನಿಂದ ಡಿಕೆ ಶಿವಕುಮಾರ್ ಸ್ಪರ್ಧೆ ಮಾಡ್ತಿದ್ದಾರೆ. ಮಾಗಡಿಯಲ್ಲಿ ಕಾಂಗ್ರೆಸ್​​ ನಿಂದ ಬಾಲಕೃಷ್ಣ ವರ್ಸಸ್ ಜೆಡಿಎಸ್​ ನಿಂದ ಮಂಜುನಾಥ್ ಪೈಪೋಟಿಗೆ ಇಳಿಯಲಿದ್ದಾರೆ.

ರಾಮನಗರ 4 ಕ್ಷೇತ್ರ ಯಾರಿಗೆ ಎಷ್ಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 0
ಕಾಂಗ್ರೆಸ್​ – 1
ಜೆಡಿಎಸ್ – 3

ರಾಮನಗರ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಾಗಡಿ : ಜೆಡಿಎಸ್ ಮುನ್ನಡೆ
ರಾಮನಗರ : ಜೆಡಿಎಸ್ ಮುನ್ನಡೆ
ಕನಕಪುರ : ಕಾಂಗ್ರೆಸ್ ಮುನ್ನಡೆ
ಚನ್ನಪಟ್ಟಣ : ಜೆಡಿಎಸ್ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೋಲಾರ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಉತ್ತರ ಕನ್ನಡ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಮಗಳೂರು 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

 

- Advertisement -

Latest Posts

Don't Miss