Monday, July 22, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಶಿವಮೊಗ್ಗ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕದ ನಂಬರ್ 01 ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕರ್ನಾಟಕ ಟಿವಿಯ ಫೆಬ್ರವರಿ ಸರ್ವೆಯ ಟ್ರೆಂಡ್ ನೋಡೋದಾದ್ರೆ..

ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ. ಶಿವಮೊಗ್ಗ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರ ಬರುತ್ತೆ. ಶಿವಮೊಗ್ಗ ಗ್ರಾಮೀಣ, ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಸಾಗರ ಕ್ಷೇತ್ರಗಳು ಶಿವಮೊಗ್ಗ ಜಿಲ್ಲೆ ವ್ಯಾಪ್ತಿಗೆ ಬರುತ್ವೆ.

ಮಾಜಿ ಸಿಎಂ ಯಡಿಯೂರಪ್ಪ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಶಿಕಾರಿಪುರ ಕ್ಷೇತ್ರದಿಂದ ಬಹುತೇಕ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡೋದು ಬಹುತೇಕ ಫಿಕ್ಸ್. ಮತ್ತೊಂದೆಡೆ ಈಶ್ವರಪ್ಪಗೆ ಟಿಕೆಟ್ ಸಿಗುತ್ತಾ ಇಲ್ವಾ ಅನ್ನೋ ಚರ್ಚೆ ನಡೀತಿದೆ. ಧನಂಜಯ್ ಸರ್ಜಿ ಬಿಜೆಪಿಯಿಂದ ಶಿವಮೊಗ್ಗ ಸಿಟಿಗೆ ಟಿಕೆಟ್ ಕೇಳ್ತಿದ್ದು, ಬಿಜೆಪಿ ಏನ್ ಮಾಡುತ್ತೆ ಅನ್ನೋ ಕುತೂಹಲ ಇದೆ.

ಜೊತೆಗೆ ಹಾಲಪ್ಪ, ಸಹೋದರರ ಫೈಟ್​ ಗೆ ಕಾರಣವಾಗಿರೋ ಸೊರಬ, ಮಧು ಬಂಗಾರಪ್ಪ ವರ್ಸಸ್ ಕುಮಾರ್ ಬಂಗಾರಪ್ಪ ಫೈಟ್​, ಕಿಮ್ಮನೆ ವರ್ಸಸ್ ಆರಗ ಜ್ಞಾನೇಂದ್ರ ಫೈಟ್ ಕೂಡ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಜೆಡಿಎಸ್ ಕೂಡ ನಿರ್ಣಾಯಕ ಇಲ್ಲಿ.

ಸದ್ಯ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 7 ಕ್ಷೇತ್ರಗಳಲ್ಲಿ ಬಿಜೆಪಿ 5 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಎಲ್ಲೂ ಮುನ್ನಡೆ ಪಡೆದಿಲ್ಲ… ಜೆಡಿಎಸ್ 2 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಶಿವಮೊಗ್ಗ 7 ಕ್ಷೇತ್ರಗಳ ಸರ್ವೇ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 5
ಕಾಂಗ್ರೆಸ್​ – 0
ಜೆಡಿಎಸ್ – 2

ಶಿವಮೊಗ್ಗ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಶಿವಮೊಗ್ಗ : ಜೆಡಿಎಸ್ ಮುನ್ನಡೆ
ಭದ್ರಾವತಿ : ಜೆಡಿಎಸ್ ಮುನ್ನಡೆ
ಶಿವಮೊಗ್ಗ : ಬಿಜೆಪಿ ಮುನ್ನಡೆ
ತೀರ್ಥಹಳ್ಳಿ : ಬಿಜೆಪಿ ಮುನ್ನಡೆ
ಶಿಕಾರಿಪುರ : ಬಿಜೆಪಿ ಮುನ್ನಡೆ
ಸೊರಬ : ಬಿಜೆಪಿ ಮುನ್ನಡೆ
ಸಾಗರ : ಬಿಜೆಪಿ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ದಾವಣಗೆರೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿತ್ರದುರ್ಗ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಳ್ಳಾರಿ-ವಿಜಯನಗರ 10 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕೊಪ್ಪಳದ 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.? ರೆಡ್ಡಿ ಕಥೆ ಏನು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ರಾಯಚೂರು 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೀದರ್ ಜಿಲ್ಲೆ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

 

 

- Advertisement -

Latest Posts

Don't Miss