Thursday, July 25, 2024

Latest Posts

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Political News:

Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.? ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲಬಹುದು ಅನ್ನೋ ಕುತೂಹಲ ಇಡೀ ರಾಜ್ಯಾದ್ಯಂತ ಮನೆ ಮಾಡಿದೆ. ಈ ನಡುವೆ, ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು ಎಲ್ಲಾ 224 ಕ್ಷೇತ್ರಗಳ ಟ್ರೆಂಡ್ ನೀಡ್ತಿದೆ. ಅದರಂತೆ ಫೆಬ್ರವರಿಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು.? ಯಾವ ಜಿಲ್ಲೆಯಲ್ಲಿ ಯಾರ ಪ್ರಾಬಲ್ಯ ಹೇಗಿದೆ.? ಕ್ಷೇತ್ರವಾರು ಟ್ರೆಂಡ್ ಏನು ಅನ್ನೋ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ವಿಜಯಪುರ 8 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಘಟಾನುಘಟಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಬಿ. ಪಾಟೀಲ್​ ಇರುವ ಜಿಲ್ಲೆ ವಿಜಯಪುರ. ವಿಜಯಪುರ ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಸಾಕಷ್ಟು ತೀವ್ರ ಹಣಾಹಣೆಯಿಂದ ಕೂಡಿವೆ. ಜೆಡಿಎಸ್ ಕೂಡ ಇಲ್ಲಿ ಪ್ರಾಬಲ್ಯ ಹೊಂದಿದೆ. ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಅನ್ನೋ ಕುತೂಹಲಕ್ಕೆ ಕರ್ನಾಟಕ ಟಿವಿ ಫೆಬ್ರವರಿ ಸಮೀಕ್ಷೆಯಲ್ಲಿ ಸಿಕ್ಕ ಉತ್ತರ ಏನಂದ್ರೆ, 8 ಕ್ಷೇತ್ರಗಳಲ್ಲಿ ಬಿಜೆಪಿ 3 ರಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನ ಕಾಯ್ದುಕೊಂಡಿದೆ.

ವಿಜಯಪುರ ಜಿಲ್ಲೆ 8 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 3
ಕಾಂಗ್ರೆಸ್​ – 3
ಜೆಡಿಎಸ್ – 2

ವಿಜಯಪುರ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಮುದ್ದೇಬಿಹಾಳ – ಬಿಜೆಪಿ ಮುನ್ನಡೆ
ದೇವರಹಿಪ್ಪರಗಿ – ಜೆಡಿಎಸ್
ಬಸವನ ಬಾಗೇವಾಡಿ – ಕಾಂಗ್ರೆಸ್
ಬಬಲೇಶ್ವರ – ಕಾಂಗ್ರೆಸ್
ವಿಜಯಪುರ ನಗರ – ಬಿಜೆಪಿ
ನಾಗಠಾಣ – ಜೆಡಿಎಸ್
ಇಂಡಿ – ಕಾಂಗ್ರೆಸ್
ಸಿಂದಗಿ – ಬಿಜೆಪಿ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಹಾವೇರಿ ಜಿಲ್ಲೆ 6 ಕ್ಷೇತ್ರ
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಬಿಜೆಪಿ – 3
ಕಾಂಗ್ರೆಸ್​ – 3

ಹಾವೇರಿ ಜಿಲ್ಲೆ ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷಕ್ಕೆ ಮುನ್ನಡೆ.?
ಕರ್ನಾಟಕ ಟಿವಿ ಫೆಬ್ರವರಿ ಟ್ರೆಂಡ್​

ಹಾನಗಲ್ : ಕಾಂಗ್ರೆಸ್​ ಮುನ್ನಡೆ
ಶಿಗ್ಗಾವಿ : ಬಿಜೆಪಿ ಮುನ್ನಡೆ
ಹಾವೇರಿ : ಕಾಂಗ್ರೆಸ್ ಮುನ್ನಡೆ
ಬ್ಯಾಡಗಿ : ಕಾಂಗ್ರೆಸ್ ಮುನ್ನಡೆ
ಬಿಜೆಪಿ : ಬಿಜೆಪಿ ಮುನ್ನಡೆ
ರಾಣೆಬೆನ್ನೂರು : ಬಿಜೆಪಿ ಮುನ್ನಡೆ

ಇದು ಫೆಬ್ರವರಿ ಟ್ರೆಂಡ್ ಮಾತ್ರ ಅಷ್ಟೇ. ಇನ್ನೂ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಜೊತೆಗೆ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್​ನಲ್ಲಿ ಸಾಕಷ್ಟು ಬದಲಾವಣೆ ಆಗೋ ಸಾಧ್ಯತೆ ಇದೆ. ನೀವೂ ಕೂಡ ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​​ನಲ್ಲಿ ತಿಳಿಸಬಹುದು. ನಿಮ್ಮ ಕ್ಷೇತ್ರ ಯಾವುದು.? ನಿಮ್ಮ ಕ್ಷೇತ್ರದಲ್ಲಿ ಯಾರ್ ಆಗ್ತಾರೆ ಶಾಸಕರು.? ಕಾಮೆಂಟ್ ಮಾಡಿ, ನಿಮ್ಮ ಅಭಿಪ್ರಾಯ ತಿಳಿಸಿ.

ಪೊಲಿಟಿಕಲ್ ಬ್ಯುರೋ, ಕರ್ನಾಟಕ ಟಿವಿ.

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹುಬ್ಬಳ್ಳಿ-ಧಾರವಾಡ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಗದಗ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

- Advertisement -

Latest Posts

Don't Miss