Karnataka TV megha Survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್ ಕೊಡ್ತಿರೋ ಕರ್ನಾಟಕ ಟಿವಿ, ಜನವರಿಯಲ್ಲೂ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.
ಸದ್ಯ ರಾಜ್ಯದಲ್ಲಿ ಈಗಲೂ ಅತಂತ್ರ ಫಲಿತಾಂಶ ಬರಲಿದೆ ಅನ್ನೋದು ಕರ್ನಾಟಕ ಟಿವಿಯ ಜನವರಿ ಟ್ರೆಂಡ್. ಈ ಕ್ಷಣಕ್ಕೆ ಜೆಡಿಎಸ್ ಪಕ್ಷ ಮಾತ್ರ 93 ಅಭ್ಯರ್ಥಿಗಳ ಪಟ್ಟಿಯನ್ನ ಘೋಷಣೆ ಮಾಡಿದೆ. ಹೀಗಾಗಿ, ಕೆಲವೊಂದು ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿರೋ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿಗೆ ಇನ್ನೂ ಅಭ್ಯರ್ಥಿಗಳ ಗೊಂದಲ ಇದೆ. ಕರ್ನಾಟಕ ಟಿವಿಯ ಜನವರಿ ಸರ್ವೇ ಪ್ರಕಾರ, 224 ಕ್ಷೇತ್ರಗಳ ಪೈಕಿ ಬಿಜೆಪಿ 99, ಕಾಂಗ್ರೆಸ್ 79, ಜೆಡಿಎಸ್ 41, ಆಮ್ ಆದ್ಮಿ ಪಕ್ಷ 2, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1, ಪಕ್ಷೇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಟಿವಿ ಜನವರಿ ಟ್ರೆಂಡ್
ಪಕ್ಷ
ಬಿಜೆಪಿ – 99
ಕಾಂಗ್ರೆಸ್ – 79
ಜೆಡಿಎಸ್ – 41
ಆಪ್ – 02
ಕೆಆರ್ ಪಿಪಿ – 01
ಪಕ್ಷೇತರ – 02
ಬೆಂಗಳೂರು ನಗರದ 28 ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸ್ಥಾನ.?
ಕರ್ನಾಟಕದ 224 ಕ್ಷೇತ್ರಗಳ ಪೈಕಿ ಅತೀ ಹೆಚ್ಚು ಕ್ಷೇತ್ರ ಇರುವ ಬೆಂಗಳೂರು ನಗರ. ಬೆಂಗಳೂರು ನಗರದಲ್ಲಿ 28 ಕ್ಷೇತ್ರಗಳಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ನೇರ ಫೈಟ್ ಇದ್ರೂ, ಜೆಡಿಎಸ್ ಕೆಲವೊಂದು ಕ್ಷೇತ್ರಗಳಲ್ಲಿ ನಿರ್ಣಯಕ ಪಾತ್ರ ವಹಿಸುತ್ತೆ. ಈಗ ಆಪ್ ಪಕ್ಷ ನಗರದಲ್ಲಿ ಹೆಚ್ಚು ಸಕ್ರಿಯ ಆಗಿರೋದ್ರಿಂದ ಆಪ್ ಯಾರಿಗೆ ಆಪ್ ಇಡುತ್ತೆ ಅನ್ನೋದೇ ಸಸ್ಪೆನ್ಸ್. ಗುಜರಾತ್ ನಲ್ಲಿ ಕಾಂಗ್ರೆಸ್ ನ 35 ಅಭ್ಯರ್ಥಿಗಳ ಸೋಲಿಗೆ ಆಪ್ ಅಂದ್ರೆ ಆಮ್ ಆದ್ಮಿ ಪಕ್ಷ ಕಾರಣವಾಗಿತ್ತು. ಆದೇ ರೀತಿಯ ಇಂಪ್ಯಾಕ್ಟ್ ಕರ್ನಾಟಕದಲ್ಲೂ ಆದ್ರೆ, ಕಾಂಗ್ರೆಸ್ ಗೆ ಕಷ್ಟ ಕಷ್ಟ. ಆದ್ರೆ, ಸದ್ಯ ಆ ಮಟ್ಟಕ್ಕೆ ಕೇವಲ ಕಾಂಗ್ರೆಸ್ ಗೆ ಆಪ್ ಇಂಪ್ಯಾಕ್ಟ್ ಮಾಡುತ್ತೆ ಅನ್ನುವಂತಿಲ್ಲ. ಕೆಲವೊಂದು ಕ್ಷೇತ್ರಗಳಲ್ಲಿ ಬಿಜೆಪಿಗೂ ಆಮ್ ಆದ್ಮಿ ಪಕ್ಷ ಹಿನ್ನಡೆ ಮಾಡಬಹುದು. ಅಭ್ಯರ್ಥಿಗಳ ಮೇಲೆ ಅದು ಡಿಪೆಂಡ್ ಆಗುತ್ತೆ.
ಬೆಂಗಳೂರಿನ 28 ಕ್ಷೇತ್ರಗಳ ಕರ್ನಾಟಕ ಟಿವಿಯ ಜನವರಿ ಟ್ರೆಂಡ್ ಗಮನಿಸಿದ್ರೆ, ಬಿಜೆಪಿ 13, ಕಾಂಗ್ರೆಸ 12, ಜೆಡಿಎಸ್ 2, ಆಪ್ 1 ಕ್ಷೇತ್ರಗಳಲ್ಲಿ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದೆ.
ಬೆಂಗಳೂರು ನಗರ 28 ಕ್ಷೇತ್ರ
ಬಿಜೆಪಿ – 13
ಕಾಂಗ್ರೆಸ್ – 12
ಜೆಡಿಎಸ್ – 02
ಆಪ್ – 01
ಬೆಂಗಳೂರು ನಗರ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ. ಕೆಲವೊಂದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೂ ಅಭ್ಯರ್ಥಿಗಳ ಕೊರತೆ ಇದೆ. ಇನ್ನು, ಜೆಡಿಎಸ್ ಗೂ ಅಭ್ಯರ್ಥಿಗಳ ಕೊರತೆ ಬೆಂಗಳೂರಿನಲ್ಲಿದೆ. ಈ ನಡುವೆ, ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಟೀವ್ ಆಗಿದ್ದು, ಕೆಲವೊಂದು ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಪಡೆದುಕೊಳ್ತಿವೆ. ಹೀಗಾಗಿ, ಬೆಂಗಳೂರು ನಗರ ತುಂಬಾನೇ ಪ್ರಾಮುಖ್ಯತೆಯನ್ನ ಪಡೆದುಕೊಂಡಿವೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಆದ್ಮೇಲೆ, ಸಾಕಷ್ಟು ಬದಲಾವಣೆ ನಿರೀಕ್ಷೆ ಮಾಡಬಹುದು. ಕರ್ನಾಟಕ ಟಿವಿ ಮತ್ತೆ ಫೆಬ್ರವರಿಗೂ ಟ್ರೆಂಡ್ ನೀಡಲಿದೆ. ಅಷ್ಟೊತ್ತಿಗಾಗಲೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟ ಮಾಡಲಿದೆ. ಹೀಗಾಗಿ, ಫೆಬ್ರವರಿ ಟ್ರೆಂಡ್ ಸಾಕಷ್ಟು ಕುತೂಹಲವನ್ನ ಮೂಡಿಸಿದೆ.
ಕರ್ನಾಟಕ ಟಿವಿ, ಬೆಂಗಳೂರು..
ಕರ್ನಾಟಕ ಟಿವಿ ಜನವರಿ ಸರ್ವೇ. ಕರಾವಳಿ ಕರ್ನಾಟಕದ 19 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?
ಕರ್ನಾಟಕ ಟಿವಿ ಜನವರಿ ಸರ್ವೇ. ಮಧ್ಯ ಕರ್ನಾಟಕದ 25 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?
ಕರ್ನಾಟಕ ಟಿವಿ ಜನವರಿ ಸರ್ವೇ. ಕಲ್ಯಾಣ ಕರ್ನಾಟಕದ 41 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?