Monday, December 23, 2024

Latest Posts

ಕರ್ನಾಟಕ ಟಿವಿ ಜನವರಿ ಸರ್ವೇ. ಕಿತ್ತೂರು ಕರ್ನಾಟಕದ 50 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸ್ಥಾನ.?

- Advertisement -

Karnataka Tv Megha Survey:

ಬೆಂಗಳೂರು :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್ ಕೊಡ್ತಿರೋ ಕರ್ನಾಟಕ ಟಿವಿ, ಜನವರಿಯಲ್ಲೂ ಸಮೀಕ್ಷೆಯನ್ನ ಪ್ರಸಾರ ಮಾಡಿದೆ.

ಸದ್ಯ ರಾಜ್ಯದಲ್ಲಿ ಈಗಲೂ ಅತಂತ್ರ ಫಲಿತಾಂಶ ಬರಲಿದೆ ಅನ್ನೋದು ಕರ್ನಾಟಕ ಟಿವಿಯ ಜನವರಿ ಟ್ರೆಂಡ್. ಈ ಕ್ಷಣಕ್ಕೆ ಜೆಡಿಎಸ್ ಪಕ್ಷ ಮಾತ್ರ 93 ಅಭ್ಯರ್ಥಿಗಳ ಪಟ್ಟಿಯನ್ನ ಘೋಷಣೆ ಮಾಡಿದೆ. ಹೀಗಾಗಿ, ಕೆಲವೊಂದು ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಫೈನಲ್ ಆಗಿರೋ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿಗೆ ಇನ್ನೂ ಅಭ್ಯರ್ಥಿಗಳ ಗೊಂದಲ ಇದೆ. ಕರ್ನಾಟಕ ಟಿವಿಯ ಜನವರಿ ಸರ್ವೇ ಪ್ರಕಾರ, 224 ಕ್ಷೇತ್ರಗಳ ಪೈಕಿ ಬಿಜೆಪಿ 99, ಕಾಂಗ್ರೆಸ್ 79, ಜೆಡಿಎಸ್ 41, ಆಮ್ ಆದ್ಮಿ ಪಕ್ಷ 2, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1, ಪಕ್ಷೇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಟಿವಿ ಜನವರಿ ಟ್ರೆಂಡ್

ಪಕ್ಷ

ಬಿಜೆಪಿ – 99
ಕಾಂಗ್ರೆಸ್ – 79
ಜೆಡಿಎಸ್ – 41
ಆಪ್​ – 02
ಕೆಆರ್​​ ಪಿಪಿ – 01
ಪಕ್ಷೇತರ – 02

ಕಿತ್ತೂರು ಕರ್ನಾಟಕ ಭಾಗದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹುಬ್ಬಳ್ಳಿ-ಧಾರವಾಡ, ಹಾವೇರಿ ಆರು ಜಿಲ್ಲೆಗಳು ಸೇರಿ ಒಟ್ಟು 50 ವಿಧಾನಸಭಾ ಕ್ಷೇತ್ರ ಬರುತ್ತೆ. ಲಿಂಗಾಯಿತ ಪ್ರಾಬಲ್ಯ ಇರುವಂತಹ ಕ್ಷೇತ್ರಗಳು ಹೆಚ್ಚು. ಜೊತೆಗೆ ಹುಬ್ಬಳ್ಳಿ-ಬೆಳಗಾವಿ ಕೇಂದ್ರೀಕೃತ ರಾಜಕಾರಣ ಹೆಚ್ಚು ಈ ಭಾಗದಲ್ಲಿ. ಕರ್ನಾಟಕ ಟಿವಿಯ ಜನವರಿ ಟ್ರೆಂಡ್ ಪ್ರಕಾರ ಕಿತ್ತೂರು ಕರ್ನಾಟಕ ಭಾಗದ 50 ಕ್ಷೇತ್ರಗಳ ಪೈಕಿ, ಬಿಜೆಪಿ ಅತೀ ಹೆಚ್ಚು 29 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 19, ಜೆಡಿಎಸ್ 02 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.

ಕಿತ್ತೂರು ಕರ್ನಾಟಕ (50)
ಕರ್ನಾಟಕ ಟಿವಿ ಜನವರಿ ಟ್ರೆಂಡ್

ಬಿಜೆಪಿ – 29
ಕಾಂಗ್ರೆಸ್ – 19
ಜೆಡಿಎಸ್ – 02
ಇತೆರೆ – 00

ಕಿತ್ತೂರು ಕರ್ನಾಟಕದ 6 ಜಿಲ್ಲೆಗಳಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಅನ್ನೋದನ್ನ ನೋಡೋದಾದ್ರೆ..

ಕಿತ್ತೂರು ಕರ್ನಾಟಕ
ಜಿಲ್ಲೆ ಬಿಜೆಪಿ ಕಾಂಗ್ರೆಸ್ ಜೆಡಿಎಸ್​ ಇತರೆ
ಬೆಳಗಾವಿ (18) – 11 07 00 00
ಬಾಗಲಕೋಟೆ (7) – 03 04 00 00
ವಿಜಯಪುರ (8) – 04 02 02 00
ಗದಗ (04) – 04 00 00 00
ಧಾರವಾಡ (7) – 03 04 00 00
ಹಾವೇರಿ (6) – 04 02 00 00

ಕಿತ್ತೂರು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ರೆ, ಆ ಪಕ್ಷ ಅಧಿಕಾರಕ್ಕೆ ಬರಲು ಸುಲಭವಾಗುತ್ತೆ. ಸದ್ಯ ಬಿಜೆಪಿ ಈ ಭಾಗದಲ್ಲಿ ಮುನ್ನಡೆದ ಕಾಯ್ದುಕೊಂಡಿದ್ದು, ಮುಂದಿನ ದಿನಗಳಲ್ಲಿ ಅಂದ್ರೆ, ಮೂರು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಫೈನಲ್ ಆದ್ಮೇಲೆ, ಸಾಕಷ್ಟು ಬದಲಾವಣೆ ನಿರೀಕ್ಷೆ ಮಾಡಬಹುದು. ಇದೇ ಫೈನಲ್ ಅಲ್ಲ. ಕರ್ನಾಟಕ ಟಿವಿ ಮತ್ತೆ ಫೆಬ್ರವರಿಗೂ ಟ್ರೆಂಡ್ ನೀಡಲಿದೆ. ಅಷ್ಟೊತ್ತಿಗಾಗಲೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿ ಪ್ರಕಟ ಮಾಡಲಿದೆ. ಹೀಗಾಗಿ, ಫೆಬ್ರವರಿ ಟ್ರೆಂಡ್ ಸಾಕಷ್ಟು ಕುತೂಹಲವನ್ನ ಮೂಡಿಸಿದೆ.

ಕರ್ನಾಟಕ ಟಿವಿ, ಬೆಂಗಳೂರು..

ಕರ್ನಾಟಕ ಟಿವಿ ಜನವರಿ ಸರ್ವೇ | ಯಾವ ಪಕ್ಷಕ್ಕೆ ಎಷ್ಟು ಸೀಟು..? ಹೇಗಿದೆ ಕರ್ನಾಟಕದಲ್ಲಿ ಎಲೆಕ್ಷನ್ ಟ್ರೆಂಡ್.?

“ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ” : ಆರ್.ಅಶೋಕ್

ಸಕ್ಕರೆ ನಾಡು ಮಂಡ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ

- Advertisement -

Latest Posts

Don't Miss