Political News: ಕೇರಳದ ವೈನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ರಾಹುಲ್ ಗಾಂಧಿ ಪರ ಪ್ರಚಾರ ನಡೆಸಲು, ವೈನಾಡಿಗೆ ಪಯಣ ಬೆಳೆಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ದೇವರ ನಾಡಿನ ಜನರಿಂದ ಸಿಗುತ್ತಿರುವ ಅಭೂತಪೂರ್ವ ಬೆಂಬಲ ನಮ್ಮ ಗೆಲುವಿನ ಭರವಸೆಯನ್ನು ಹೆಚ್ಚಿಸಿದೆ. ನಮ್ಮ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಕರ್ನಾಟಕದ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಯ ಮೂಲಕ ಅನುಕೂಲಗಳನ್ನು ಪಡೆಯುತ್ತಿದ್ದಾರೆ. ಅದರಂತೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ಮಹಿಳೆಯರಿಗೂ ವಾರ್ಷಿಕವಾಗಿ 1 ಲಕ್ಷ ರೂಪಾಯಿಗಳನ್ನು ನೀಡಲಿದೆ, ಇದರ ಜೊತೆಗೆ 5 ನ್ಯಾಯ ಹಾಗೂ 25 ಗ್ಯಾರಂಟಿಗಳನ್ನು ಜಾರಿಗೆ ತರಲಿದೆ ಎಂದರು.
ಮಾತು ಮುಂದುವರೆಸಿ, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ಡಿಕೆಶಿ, ಬಿಜೆಪಿ ಪಕ್ಷವು ರೈತರಿಗೆ ನೀಡಬೇಕಾದ ಹಣವನ್ನು ಬಿಡುಗಡೆ ಮಾಡಿಲ್ಲ, ಕಪ್ಪು ಹಣವನ್ನು ತಂದು ಎಲ್ಲರಿಗೂ 15 ಲಕ್ಷರೂಪಾಯಿಗಳನ್ನು ನೀಡುತ್ತೇವೆ ಎಂಬ ಬರವಸೆ ನೀಡಿದ್ದರೂ ಅದೂ ಇನ್ನೂ ಫಲಿಸಿಲ್ಲ. ನಾವು ಭಾರತದ ಅಭಿವೃದ್ಧಿಗೆ ಒಟ್ಟಾಗಿ ಹೋರಾಡೋಣ, ಕಾಂಗ್ರೆಸ್ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸೋಣ. ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ. ಕೇರಳದ ಜನರು ನಮಗೆ ತೋರುತ್ತಿರುವ ಪ್ರೀತಿ, ಬೆಂಬಲಕ್ಕೆ ಧನ್ಯವಾದಗಳು, ನಿಮ್ಮ ಈ ಬೆಂಬಲ ನಮ್ಮಲ್ಲಿ ಗೆಲುವಿನ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೇರಳದ ವೈನಾಡು ಜಿಲ್ಲೆಯ ಕಲ್ಪೆಟ್ಟಾದಲ್ಲಿ ಇಂದು ನಡೆದ ಸರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ನಮ್ಮ ನಾಯಕರಾದ ಶ್ರೀ @RahulGandhi ಅವರ ಪರ ಪ್ರಚಾರ ಮಾಡಿದೆ.
ನಮ್ಮ ಪಕ್ಷವು 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ಕರ್ನಾಟಕದ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಯ ಮೂಲಕ… pic.twitter.com/V37ndAhdU8
— DK Shivakumar (@DKShivakumar) April 18, 2024