Karwar News: ಕಾರವಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಬಳಿ ನಡೆದಿದೆ.
ಕಿರಣ ಬಾಲಚಂದ್ರ ನಾಯ್ಕ (25)ಮೃತ ಯುವಕನಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇಡಗುಂಜಿಯಿಂದ ಹೊನ್ನಾವರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಈತ ಸ್ನೇಹಿತನ ತಾಯಿಗೆ ಅನಾರೋಗ್ಯ ಹಿನ್ನಲೆ ಔಷಧಿ ತಲುಪಿಸಲು ತೆರಳುತ್ತಿದ್ದನಂತೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.




