ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ – ವಿಕ್ಕಿ ದಂಪತಿ!

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021 ರಲ್ಲಿ ವಿವಾಹವಾದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್​​ಗಿಂತಲೂ ಏಳು ವರ್ಷ ದೊಡ್ಡವರು. ಇದೀಗ, ನಾಲ್ಕು ವರ್ಷದ ಬಳಿಕ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಖಾತ್ರಿ ಮಾಡಿದ್ದಾರೆ.

ನಟಿ ಕತ್ರಿನಾ ಕೈಫ್ ಮಾರ್ಚ್ 2025 ರಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸಂತಾನ ಭಾಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಪೂಜೆಯ ಫಲವಾಗಿ ಈಗ ಅವರು ಗರ್ಭಿಣಿ ಆಗಿದ್ದಾರೆ. ತಮ್ಮ ಹಾಗೂ ವಿಕ್ಕಿ ಕೌಶಲ್ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ತಾವು ತಾಯಿ ಆಗಲಿರುವ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಕತ್ರಿನಾ ಮತ್ತು ವಿಕ್ಕಿ ಕೌಶಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನ ಹಂಚಿಕೊಂಡಿದ್ದಾರೆ. ‘ನಮ್ಮ ಜೀವನದ ಅತ್ಯುತ್ತಮ ಅಧ್ಯಾಯಯದ ಆರಂಭದಲ್ಲಿ ನಾವಿದ್ದೇವೆ. ಈ ಸಮಯದಲ್ಲಿ ನಮ್ಮ ಹೃದಯ ಪ್ರೀತಿ ಮತ್ತು ಕೃತಜ್ಞತೆಯಿಂದ ತುಂಬಿದೆ’ ಎಂದು ಕತ್ರಿನಾ ಆ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಈಗ ಕತ್ರಿನಾ ಕೈಫ್ ಒಂದು ಎರಡು ವರ್ಷಗಳವರೆಗೆ ಸಿನಿಮಾಗಳಿಂದ ವಿರಾಮ ಹಿಡಿಯಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹಲವು ಸೆಲೆಬ್ರಿಟಿಗಳು ಇವರನ್ನು ಅಭಿನಂದಿಸಿದ್ದಾರೆ.

ವರದಿ : ಲಾವಣ್ಯ ಅನಿಗೋಳ

About The Author