ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಎರಡು ಬಾರಿ ವಿಚಾರಣೆ ನಡೆಯಿತು.
ಈಗ ಸುಪ್ರೀಂ ಕೋರ್ಟ್ ಆದೇಶ ಮಾಡಿದರೆ ನಮ್ಮ ರೈತರ ಪರಿಸ್ಥಿತಿ ಏನಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ರಾಜ್ಯದಲ್ಲಿ ವಿದ್ಯುತ್ ಅಭಾವ ಹೆಚ್ಚಾಗುತ್ತಿದೆ. ಜಲ ವಿದ್ಯುತ್ ಸ್ಥಗಿತ ಆಗುತ್ತಿದೆ. ಕಲ್ಲಿದ್ದಲು ಖರಿದಿಗೆ ಹಣ ಇಲ್ಲ. ಜಿರೋ ಬಿಲ್ ಬದಲು ಜಿರೊ ವಿದ್ಯುತ್ ಸ್ಥಿತಿ ಬಂದಿದೆ. ಗ್ಯಾರೆಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಹಣ ಬಳಕೆ ಮಾಡಿದ್ದಾರೆ. ಎಸ್ಸಿಪಿ ಟಿಎಸ್ಪಿ ಕಾಯ್ದೆಯ 7ಡಿ ಯನ್ನು ತೆಗೆದು ಹಾಕುವುದಾಗಿ ಹೇಳಿದ್ದರು. ಅಧಿವೇಶನದಲ್ಲಿ ಅದನ್ನು ಯಾಕೆ ಮಂಡನೆ ಮಾಡಲಿಲ್ಲ. ಅವರಿಗೆ ಹಣ ದುರ್ಬಳಕೆ ಮಾಡಿಕೊಳ್ಳಬೆಕಿದೆ ಹೀಗಾಗಿ ಅದನ್ನು ತೆಗೆದು ಹಾಕುತ್ತಿಲ್ಲ ಎಂದರು.
ಪೊಲಿಸ್ ಸ್ಟೇಶನ್ ಗಳಲ್ಲಿ ವಸೂಲಿ ದಂಧೆ ಮುಕ್ತವಾಗಿ ನಡೆಯುತ್ತಿದೆ. ಏಜೆಂಟರನ್ನು ಇಟ್ಟುಕೊಂಡು ವಸೂಲಿ ನಡೆಸುತ್ತಿದ್ದಾರೆ. ಜಿಲ್ಲೆಗಳಲ್ಲಿ ಕಾನ್ಬಸ್ಟೇಬಲ್ ಕಿರುಕುಳತಾಳದೇ ಮೇಲಾಧಿಕಾರಿಗಳ ವಿರುದ್ಧ ನೇರವಾಗಿಯೇ ಆರೋಪ ಮಾಡಿದ್ದಾರೆ. ಇವರು ನೂರು ದಿನದಲ್ಲಿ ರಾಜ್ಯವನ್ನು ಅಧೊಗತಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಬಿಜೆಪಿ ಈ ಸರ್ಕಾರದ ವಿರುದ್ದ ಹೋರಾಟ ಆರಂಭಿಸಿದೆ. ಇವರು ಇದೇ ರೀತಿ ಮುಂದುವರೆದರೆ ರಾಜ್ಯದ ಜನರೇ ಹೋರಾಟ ಮಾಡುವ ಸಮಯ ಬರುತ್ತದೆ ಎಂದರು.
ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಮನವಿ ಮಾಡಿಕೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗೃಹ ಲಕ್ದ್ಮೀ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿ ಬಂದಿವೆ ಅಂತ ಹೇಳಿದ್ದಾರೆ. ಆದರೆ, ಎಷ್ಟು ಜನರನ್ನು ಆಯ್ಕೆ ಮಾಡಿದ್ದಾರೆ ಎಂದು ಬಹಿರಂಗಪಡಿಸಿಲ್ಲ. ಫಲಾನುಭವಿಗಳನ್ನು ಹೊರಗಿಡುವ ಪ್ರಯತ್ನ ಮಾಡಲಾಗುತ್ತಿದೆ. ಅರೆ ಬೆಂದ ಯೋಜನೆಗಳಿಗೆ ನಮ್ಮ ಬೆಂಬಲ ಇಲ್ಲ ಎಂದರು.ಬಿಜೆಪಿ ಶಾಸಕ ಎಸ್ ಟಿ ಸೊಮಶೇಖರ್ ಗೃಹ ಲಕ್ಷ್ಮಿ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಯಾಕೆ ಬೆಂಬಲ ಕೊಡುತ್ತಿದ್ದಾರೆ ಅನ್ನುವುದನ್ನು ಕೇಳುತ್ತೇನೆ ಎಂದರು.
Book publish : ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ
Formers loans: ಸಾಲ ವಸೂಲಿ ನಿಲ್ಲಿಸಬೇಕು ;ಹೆಚ್ಚಿದ ರೈತರ ಆತ್ಮಹತ್ಯೆ: ಬೊಮ್ಮಾಯಿ..!