Friday, July 11, 2025

Latest Posts

Praladh joshi: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವ ಪ್ರಶ್ನೆ ಇಲ್ಲ.

- Advertisement -

ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ  ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ  ವಿಚಾರವಾಗಿ ಮಾತನಾಡಿರುವ ವಿಚಾರವಾಗಿ  ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು  ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು.

ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ ವಹಿಸುವುದಿಲ್ಲ ಇಷ್ಟರ ನಡುವೆಯೂ ನಾವು ಸಾಧ್ಯವಾದಷ್ಟು ರಾಜ್ಯ ಸರ್ಕಾರಕ್ಕೆ ಸಹಕಾರ ಕೊಟ್ಟಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ  ಮುಂದೆ 2500 ಕ್ಯೂಸೆಕ್ ನೀರು ಬಿಡೋದಾಗಿ ಹೇಳೋ ಅವಶ್ಯಕತೆ ಇರಲಿಲ್ಲ ತಮಿಳುನಾಡು ಮತ್ತು ಕರ್ನಾಟಕ ಸಿಎಂಗಳು ಒಂದೆಡೆ ಕುಳಿತು ಚರ್ಚೆ ಮಾಡಬೇಕು.

ರಾಜ್ಯದ ಎಲ್ಲ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ ಮುಂದೆಯೂ ರಾಜ್ಯ ಸರ್ಕಾರದ ಜೊತೆಗೆ ಇರಲಿದ್ದೇವೆ. ಸದ್ಯದ ನೀರಿನ ಪರಿಸ್ಥಿತಿಯ ಕುರಿತು ಸಮಗ್ರ ಅಧ್ಯಯನಕ್ಕಾಗಿ ಅಧಿಕಾರಿಗಳ ತಂಡವನ್ನು ಕಳುಹಿಸಿ ಕೊಡುವಂತೆ ಕೇಳಿದ್ದಾರೆ. ಅದನ್ನು ಕೇಂದ್ರ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ್ದೇವೆ, ಮತ್ತೊಮ್ಮೆ ಸದ್ಯದ ನೀರಿನ ಸಂಗ್ರಹದ ಅಧ್ಯಯನ ಮಾಡಲು ಹೇಳಿದ್ದೇವೆ. ಅದಕ್ಕೆ ಕೇಂದ್ರ ಸಚಿವರು ಸಹ ಒಪ್ಪಿಕೊಂಡಿದ್ದಾರೆ

ಕಾವೇರಿ ಸೇರಿದಂತೆ ಯಾವುದೇ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಬಾರದು. ಈ ನಿಟ್ಟಿನಲ್ಲಿ ಸರ್ವ ರೀತಿಯ ಸಹಕಾರವನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ ಆದರೆ ರಾಜ್ಯ ಸರ್ಕಾರ ಆರಂಭದಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಆದಷ್ಟು ಬೇಗ ನಮ್ಮ ನೀರನ್ನು ನಾವು ಉಳಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಮುತಾಲಿಕ್ ವಿರುದ್ದ ದೂರು ದಾಖಲು..!

Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ

Cauvery water: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ‌ಮಾಡಬೇಕು; ಯತ್ನಾಳ್..!

- Advertisement -

Latest Posts

Don't Miss