Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ.
ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.
ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದು, ಈ ವೇಳೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಬಳಿಕ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಯಿತು ಎಂದು ಹೇಳಲಾಗಿದೆ.
ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು. ಪ್ರತಿಭಟನಾಕಾರರು ಹೈವೆಯಲ್ಲಿ ಕೈಯಲ್ಲಿ ಖಾಲಿ ಬಿಂದಿಗೆ ಹಿಡಿದು ಉರುಳು ಸೇವೆ ಮಾಡುವ ಮೂಲಕ ಕೂಡಲೇ ತಮಿಳುನಾಡಿಗೆ ಹರಿಯುತ್ತಿರುವ ನೀರು ನಿಲ್ಲಿಸಬೇಕೆಂದು ಪ್ರತಿಭಟನೆ ನಡೆಸಿದ್ದು, ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

