ರಾಜ್ಯ ಸುದ್ದಿ: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.
ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Cattle: ದನದ ಹಟ್ಟಿಯಲ್ಲಿ ಬೆಂಕಿ ಅವಘಡ : ಏಳು ಜಾನುವಾರುಗಳು ಸಜೀವ ದಹನ….
Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!