State News : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದು, CWRC ಆದೇಶ ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ.
CWRC ಈ ಹಿಂದೆ ನೀಡಿದ್ದ ಇದೇ ಆದೇಶವನ್ನು CWMA ಎತ್ತಿಹಿಡಿದಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು
Ganesh Fest : ಧರ್ಮ ದಂಗಲ್ ಮಧ್ಯೆ ಮುಸ್ಲಿಂ ಸರಕಾರಿ ನೌಕರನ ಸೌಹಾರ್ಧತೆ ಸಾರುವ ಕಥನ