ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ ಬೆಳಿಗ್ಗೆ 10 ರಿಂದ ಜಾರಿಗೆ ಬರಲಿದ್ದು ಶೇ. 2ರಷ್ಟು ಪ್ರಯಾಣಿಕರು ರ‍್ಯಾಂಡಮ್ ಪರೀಕ್ಷೆಗೆ ಒಳಗಾಗುತ್ತಾರೆ. ಅವರ ಸ್ವ್ಯಾಬ್ ಮಾದರಿಗಳನ್ನು ಪಡೆಯಲಾಗುತ್ತದೆ. ಬಳಿಕ ವಿಮಾನ ನಿಲ್ದಾಣದಿಂದ ನಿರ್ಗಮಿಸುತ್ತಾರೆ. ಅಂತರರಾಷ್ಟ್ರೀಯ ಪ್ರಯಾಣಿಕರು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಗಾಗುತ್ತಾರೆ ಮತ್ತು ರೋಗಲಕ್ಷಣದ ಪ್ರಯಾಣಿಕರನ್ನು ಪ್ರತ್ಯೇಕಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಬಿಹಾರದ ಮೋತಿಹಾರಿ ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ : 8 ಜನರ ಸಾವು, 2 ಡಜನ್ ಗೂ ಹೆಚ್ಚು ಮಂದಿ ಸಮಾಧಿಯಾಗಿರುವ ಶಂಕೆ
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಗಮನದ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಆದರೆ ರೋಗಲಕ್ಷಣಗಳು ಕಂಡುಬಂದರೆ ಅವರು ಪರೀಕ್ಷೆಗೆ ಒಳಗಾಗುತ್ತಾರೆ ಎಂದು ಪರಿಷ್ಕೃತ ಮಾರ್ಗಸೂಚಿಗಳು ತಿಳಿಸಿವೆ. ರೋಗಲಕ್ಷಣಗಳಿಲ್ಲದ ಪ್ರಯಾಣಿಕರು ತಮ್ಮ ಆರೋಗ್ಯವನ್ನು ಸ್ವಯಂ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರ ನಿಗಾ ಇಡಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಬುಧವಾರ ಹೇಳಿದ್ದರು. ದೇಶೀಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಕೋವಿಡ್ ಸಂಬಂಧಿತ ಅವಶ್ಯಕತೆಗಳು ಅಥವಾ ನಿರ್ಬಂಧಗಳನ್ನು ಘೋಷಿಸಲಾಗಿಲ್ಲ. ವಿವಿಧೆಡೆ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೋವಿಡ್ -19 ಹರಡುವುದನ್ನು ತಡೆಯಲು ಮಾಸ್ಕ್‌ಗಳನ್ನು ಕಡ್ಡಾಯಗೊಳಿಸುವ ಆರೋಗ್ಯ ಇಲಾಖೆಯ ನಿರ್ದೇಶನವನ್ನು ಉಲ್ಲೇಖಿಸಿದೆ. ಆದರೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ನೂ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ ಏಳು ಜನರಿಗೆ ಗಾಯ