ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ, ನಂಜಾವದೂತ ಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಅಶ್ವತ್ಥ್ ನಾರಾಯಣ್, ಗೋವಿಂದ್ ಕಾರಜೋಳ, ನಟ ಪುನೀತ್ ರಾಜ್‌ಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕೆಂಪೇಗೌಡ ಜಯಂತಿಯ ಶುಭಾಶಯ ತಿಳಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜಯಂತಿಯ ಹಾರ್ದಿಕ ಶುಭಾಶಯಗಳು. ಬೆಂಗಳೂರು ಸಹಜ ಸ್ಥಿತಿಗೆ ಮರಳಲಿ ಎಂದಿದ್ದಾರೆ.

About The Author