ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾದ ಬೃಹತ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡರ ಪ್ರತಿಮೆಗೆ ಕೈಮುಗಿದು ನಮಿಸುತ್ತಾ ಲೋಕಾರ್ಪಣೆ ಮಾಡಿದರು.
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ
ಈ ಪ್ರತಿಮೆ ನಿರ್ಮಾಣಕ್ಕೆ 98 ಟನ್ ಕಂಚು ಮತ್ತು 120 ಟನ್ ಉಕ್ಕು ಬಳಸಲಾಗಿದೆ. ಕೆಂಪೇಗೌಡ ಪ್ರತಿಮೆಯ ಖಡ್ಗ 4,000 ಕೆಜಿ ತೂಕವಿದ್ದು, ಇದರ ನಿರ್ಮಾಣಕ್ಕೆ 2 ವರ್ಷ 5 ತಿಂಗಳು ಸಮಯ ಹಿಡಿದಿದೆ. ಒಟ್ಟು 85 ಇಂಜಿನಿಯರ್ ಗಳು ಈ ಪ್ರತಿಮೆ ನಿರ್ಮಾಣಕ್ಕೆ ಕೆಲಸ ಮಾಡಿದ್ದಾರೆ. ಲೋಕಾರ್ಪಣೆ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಧಾನಿಗೆ ಚಪ್ಪಾಳೆ ತಟ್ಟುತ್ತಾ ಸಾಥ್ ನೀಡಿದರು.
‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೂ ಪ್ರಧಾನಿ ಚಾಲನೆ
ಹೊಸದಾಗಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ