- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕೇಶ್ವಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್‌ನಲ್ಲ ಈ ಹಣವನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇನ್ನು ಈ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -