- Advertisement -
Film News : ಸುದೀಪ್ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ಸಮಾಧಾನ ಪಟ್ಟುಕೊಂಡಿದ್ದಾರೆ.
ಕಿಚ್ಚ ಸುದೀಪ್ ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ವಿವಾದ ಬದಿಗಿಟ್ಟು ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.
‘ಏ 46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ.
ಈಗ ಸಿನಿಮಾ ಚಿತ್ರೀಕರಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಜಯ್ ಕಾರ್ತಿಕೇಯ ಅವರು ‘ಏ 46ʼ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
- Advertisement -