‘ಡಿಯರ್ ಕಣ್ಮಣಿ’ ಎಂದ ಬಿಗ್ ಬಾಸ್ ಕಿಶನ್ ಗೆ ಕಿಚ್ಚನ ಸಾಥ್…

ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಿಗಲಿ ಹಾಗೂ ಕ್ರಿಕೆಟರ್ ಪ್ರವೀಣ್ ಗೌಡ ‘ಡಿಯರ್ ಕಣ್ಮಣಿ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೀರೋ ಆಗಿ ಎಂಟ್ರಿ ಕೊಡ್ತಿದ್ದಾರೆ. ಇವತ್ತು ಗುಟ್ಟೆ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಿನಿಮಾದ ಮುಹೂರ್ತ ನೆರವೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಹಿರಿಯ ನಟಿ ರೇಖಾದಾಸ್ ಮಗಳು ಸಾತ್ವಿಕಾ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸ್ತಿದ್ದು, ವಿಸ್ಮಯ್ ಗೌಡ ಈ ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣ ಮಾಡ್ತಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದ್ದು, ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಮಹಿಳಾ ನಿರ್ದೇಶಕಿ ಎಂಟ್ರಿ ಕೊಡ್ತಿದ್ದಾರೆ.

ಡಿಯರ್ ಕಣ್ಮಣಿ ಹೆಸರೇ ಹೇಳುವ ಹಾಗೆ ಇದೊಂದು ರೊಮ್ಯಾಂಟಿಕ್ ಸಿನಿಮಾವಾಗಿದ್ದು, ಕಿಶನ್ ಇಲ್ಲಿ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ.

About The Author