ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ನೇ ಕಂತು ಇಂದು ಬಿಡುಗಡೆಯಾಗಲಿದೆ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ ಎಂಬ ಮಾಹಿತಿ ಈಗಾಗಲೇ ರೈತರಿಗೆ ತಿಳಿದಿದೆ.
ಇನ್ನೂ ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ ಮಾಡಲಾಗುತ್ತದೆ. ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿಲ್ಲದ ರೈತರು ಸಹಾಯವಾಣಿಗೆ ಕರೆ ಮಾಡಬಹುದು. ಅಲ್ಲದೇ, ಆನ್ಲೈನ್ನಲ್ಲಿಯೂ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಬಹುದಾಗಿದೆ.
ರೈತರು ಯಾವ ವೆಬ್ಸೈಟ್ ಸಂಪರ್ಕಿಸಬೇಕು..?
pmkisan.gov.in ವೆಬ್ಸೈಟ್ ನಲ್ಲಿ ಫಲಾನುಭವಿ ಸ್ಥಿತಿಯ ಬಗ್ಗೆ ಕ್ಲಿಕ್ ಮಾಡಿ, ಅದರಲ್ಲಿ ಆಧಾರ್ ಸಂಖ್ಯೆ ಹಾಗೂ pm-kisan ಖಾತೆಯ ಸಂಖ್ಯೆ ಮತ್ತು ನೊಂದಾಯಿತ ಮೊಬೈಲ್ ಸಂಖ್ಯೆತನ್ನು ಭರ್ತಿ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗುತ್ತಿದೆ.
ಅಭಿಜಿತ್ ಕರ್ನಾಟಕ ಟಿವಿ ಬೆಂಗಳೂರು.