ಇಂದು ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಕೇಂದ್ರ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಆಗ್ರಹಿಸಿದ್ದಾರೆ.
ಸಚಿವ ವಿ.ಸೋಮಣ್ಣ ಅವರು ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ 247ನೇ ಜಯಂತ್ಯೋತ್ಸವ ಮತ್ತು 201ನೇ ವಿಜಯೋತ್ಸವವನ್ನು ಆಚರಿಸಿದರು. ಬಳಿಕ ಮಾತನಾಡುತ್ತಾ, ರಾಣಿ ಚೆನ್ನಮ್ಮನವರ ಜೀವನ ಹಾಗೂ ಸಾಧನೆ ಕುರಿತಾದ ಗ್ರಂಥಗಳನ್ನು ಭಾರತೀಯ ಭಾಷೆಗಳಲ್ಲಿ ಪ್ರಕಟಿಸುವ ಕೆಲಸವನ್ನು ಕರ್ನಾಟಕ ಸರ್ಕಾರ ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಹೇಳಿದರು.
ಕಿತ್ತೂರು ಸಂಸ್ಥಾನದ ಕೋಟೆಯ ಕೊತ್ತಲುಗಳನ್ನು ಸಮರ್ಪಕವಾಗಿ ನಿರ್ವಹಿಸುವ ಅಗತ್ಯವಿರುವುದಾಗಿ ಒತ್ತಿಹೇಳಿದ್ದಾರೆ. ಈ ಸಂಬಂಧ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ವಹಿಸುವ ಮೂಲಕ ಸ್ಥಿರತೆಯನ್ನು ನೀಡಬೇಕು ಎಂದು ಶಿಫಾರಸು ಮಾಡಿದ್ದಾರೆ.
ವಿ.ಸೋಮಣ್ಣ ಬರೆದ ಪತ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮರ ಸ್ವಾತಂತ್ರ್ಯ ಹೋರಾಟ, ಸ್ವಾಭಿಮಾನ ಹಾಗೂ ಕನ್ನಡ ನಾಡಿನ ಹೆಮ್ಮೆಯ ಸಂಕೇತವಾಗಿ ಅವರ ಮಹತ್ವವನ್ನು ಹಿಗ್ಗಿಸುವ ಮೂಲಕ, ಅವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ಸಮರ್ಪಕ ಸಂರಕ್ಷಣೆಯನ್ನು ಒದಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಈ ವಿಷಯವನ್ನು ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಸಾರ್ವಜನಿಕರ ಮನಸಿನ ಪರಿಗಣನೆ ಹಾಗೂ ಕನ್ನಡ ನಾಡಿನ ಹೀರೋಯಿನ್ ಗೌರವ ವೃದ್ಧಿಗಾಗಿ ಈ ಬೇಡಿಕೆ ಅಗತ್ಯ ಎಂದು ವಿ.ಸೋಮಣ್ಣ ತಿಳಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ

