www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ.
ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ.
ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ ತಂಡದ ಅಭ್ಯಾಸ ಪಂದ್ಯದಲ್ಲಿ ಅಯ್ಯರ್ ಆಟ ಗಮನ ಸೆಳೆಯಿತು. ಅಯ್ಯರ್ ತಮ್ಮ ಎರಡನೇ ಪಂದ್ಯದ ಆತ್ಮವಿಶ್ವಾಸ ಶ್ಲಾಘನೀಯ ಅಂತ ಮಾರ್ಗನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
14ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಹಿಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 155 ರನ್ ಕಲೆ ಹಾಕಿತು. 156ರನ್ ಗುರಿ ಬೆನ್ನತ್ತಿದ ಕೆಕೆಆರ್ 15.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಗೆಲುವು ದಾಖಲಿಸಿದೆ. ಈ ಮೂಲಕ ಐಸಿಸಿ ಅಂಕಪಟ್ಟಿಯಲ್ಲಿ ಕೆಕೆಆರ್ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ.