ಗದೆ ಹಿಡಿದು, ಪೌರಾಣಿಕ ನಾಟಕದ ಡೈಲಾಗ್ ಹೊಡೆದ ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಗದೆ ಹಿಡಿದು, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಪೌರಾಣಿಕ ನಾಟಕದ ಡೈಲಾಗ್ ಹೊಡೆದಿದ್ದಾರೆ. ಶಿವಲಿಂಗೇಗೌಡರ ಡೈಲಾಗ್‌ಗೆ ನೆರೆದಿದ್ದ ಜನ ಫಿದಾ ಆಗಿದ್ದಾರೆ.

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಗಂಡಸಿಯಲ್ಲಿ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗಿದ್ದು, ನೆರೆದಿದ್ದವರ ಒತ್ತಾಯದ ಮೇರೆಗೆ ಗದೆ ಹಿಡಿದು, ಶಿವಲಿಂಗೇಗೌಡರು ನಾಟಕದ ತುಣುಕನ್ನು ಅಭಿನಯಿಸಿದ್ದಾರೆ.

ಕೆ.ಎಂ.ಶಿವಲಿಂಗೇಗೌಡ ಡೈಲಾಗ್‌ಗೆ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದಿದೆ. ಇದೇ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಶ್ರೇಯಸ್‌ಪಟೇಲ್ ಪರ ಚುನಾವಣೆ ಪ್ರಚಾರ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್, ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಭಾಗಿಯಾಗಿದ್ದರು.

ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

ಜಪಾನ್‌ನಲ್ಲಿ ಅಮೀರ್ ಖಾನ್ ಮಗ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ಪಾರ್ಟಿ..

ನಿವೃತ್ತಿ ಬಗ್ಗೆ ಮಾತನಾಡಿದ ಕ್ರಿಕೇಟಿಗ ರೋಹಿತ್ ಶರ್ಮಾ..

About The Author