ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ ಎಂದು ಟೀಕಿಸಿದ್ದಾರೆ.
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ @INCKarnataka ಸರ್ಕಾರ
ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ… pic.twitter.com/RLuyWhjhxa
— Vijayendra Yediyurappa (@BYVijayendra) June 25, 2024
ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ. ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಹೊಸ ದರದ ಅನ್ವಯ ಅರ್ಧ ಲೀಟರ್ ಹಾಲಿನ ದರ 22ರಿಂದ 24 ರೂಪಾಯಿಗೆ ಹೆಚ್ಚಳವಾಗಿದೆ.