Saturday, July 5, 2025

Latest Posts

ಕೋಡಿಶ್ರೀ ಸ್ಫೋಟಕ ಭವಿಷ್ಯ- ಸಿದ್ದು ಸರ್ಕಾರ ಪತನದ ಬಗ್ಗೆ ಶ್ರೀಗಳು ಹೇಳಿದ್ದೇನು?

- Advertisement -

ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠದ ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಆಗಾಗ ಭಯಾನಕ ಭವಿಷ್ಯ ನುಡಿಯುತ್ತಾರೆ. ಅವರು ನುಡಿದ ಭವಿಷ್ಯಗಳು ಬಹುತೇಕ ಸತ್ಯವಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಹಾಗೂ ರಾಜ್ಯದಲ್ಲಿ ಪ್ರಕೃತಿಯ ಕುರಿತು ಕೋಡಿಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈಗ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆಯಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ಅಲ್ಲದೇ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರೋದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯವನ್ನು ಹೇಳುತ್ತೇನೆ. ಹಾಗೆಯೇ, ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಕುರಿತು ಬಗ್ಗೆ ಶ್ರಾವಣದಲ್ಲಿ ಮಾತುನಾಡುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಾದ ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆ ಆಗಲಿದೆ. ಸಿದ್ದರಾಮಯ್ಯ ಅವರ ಸರ್ಕಾರ ಪತನವಾಗುತ್ತದೆ. ಕಾಂಗ್ರೆಸ್ ಒಂದಿಷ್ಟು ಶಾಸಕರು ಬಿಜೆಪಿ ಸೇರುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮಾತುಗಳು ರಾಜ್ಯದಲ್ಲಿ ಕೇಳಿಬಂದಿದ್ದವು. ಆದರೆ, ಕೋಡಿಶ್ರೀಗಳು ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ.

- Advertisement -

Latest Posts

Don't Miss