Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ.
ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ.
ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚನಕ್ಕಾಗಿ ಗುಡುಗು ಮಿಂಚು, ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. ಎಲ್ಲೋ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಗಿಡ, ಮರ, ಬಳಿ ದೈವದ, ಆರಾಧ್ಯದ ಸಂಕೇತ, ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ.ಅಂತಹ ಸೂಚನೆ ಈಗಾಗಲೆ ಸಿಕ್ಕಿದೆ ಅದರಂತೆ ಬೆಟ್ಟದಲ್ಲಿ ಮೂನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಆದ್ಯಾತ್ಮಿಕವಾಗಿ ಅವರು ನಡೆಯುತ್ತಿದ್ದಾರೆ ಹಾಗಾಗಿ ಅವರಿಗೆ ಒಳ್ಳೆಯದಾಗಲಿ. ಆಧ್ಯಾತ್ಮ ಬಿಟ್ಟು ಹೋದ್ರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎನ್ನುವ ಮೂಲಕ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಶುಭವಾಗಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಸೂಚನೆ
ನೀಡಿದ್ದಾರೆ.
ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ..
ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ