- Advertisement -
Kolar News:
ಕೋಲಾರದಲ್ಲಿ ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ
- Advertisement -